spot_img
Thursday, April 2, 2026
spot_img

ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ತೆಕ್ಕಟ್ಟೆ: ‘ಎಲ್ಲೋ ಕಲರ್ ಡೇ’

ತೆಕ್ಕಟ್ಟೆ: ವಿಶ್ವ ವಿನಾಯಕ ಸಿ.ಬಿ.ಎಸ್.ಸಿ. ಸ್ಕೂಲ್ ತೆಕ್ಕಟ್ಟೆಯಲ್ಲಿ ಪ್ಲೇ ಸ್ಕೂಲ್, ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ಮಕ್ಕಳು ಎಲ್ಲೋ ಕಲರ್ ಡೇಯನ್ನು ಆಚರಿಸಿದರು. ಮಕ್ಕಳಲ್ಲಿ ಬಣ್ಣಗಳನ್ನು ಗುರುತಿಸಿ ನೆನಪಿನಲ್ಲಿಟ್ಟುಕೊಳ್ಳುವ ಕೌಶಲವನ್ನು ವೃದ್ಧಿಸುವ ಸಲುವಾಗಿ ಪ್ರತಿ ತಿಂಗಳು ವಿವಿಧ ಬಣ್ಣಗಳ ದಿನಾಚರಣೆಯನ್ನು ಮಾಡಿ ಮಕ್ಕಳಿಗೆ ಬಣ್ಣಗಳ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಆ ಪ್ರಯುಕ್ತ ವಿದ್ಯಾರ್ಥಿಗಳು ಹಳದಿ ಬಣ್ಣದ ವಿವಿಧ ತಿನಿಸುಗಳು ಹಾಗೂ ವಸ್ತುಗಳನ್ನು ಪ್ರದರ್ಶಿಸಿದರು. ತರಗತಿ ಕೋಣೆಗಳಲ್ಲಿ ಹಳದಿ ಬಣ್ಣದ ವಸ್ತುಗಳ ಅಲಂಕಾರವನ್ನು ಮಾಡಿ ವಿದ್ಯಾರ್ಥಿಗಳು ನಲಿದಾಡಿದರು. ವಿದ್ಯಾರ್ಥಿಗಳು ನೃತ್ಯ ಹಾಗೂ ವಿವಿಧ ಕಾರ್ಯಕ್ರಮಗಳನ್ನು ನಡೆಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಹಳದಿ ಬಣ್ಣದ ಉಡುಗೆಗಳನ್ನು ತೊಟ್ಟು ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ್ ಶೆಟ್ಟಿ ಹೆಚ್, ಕಿಂಡರ್ ಗಾರ್ಟನ್ ಸಂಯೋಜಕಿ ವಿಲಾಸಿನಿ ಶೆಟ್ಟಿ, ಪ್ರಾಂಶುಪಾಲರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!