spot_img
Wednesday, January 22, 2025
spot_img

ಡ್ರೋನ್‌ ಮೂಲಕ ನಿರ್ಮಾಣ ಹಂತದ ಕಟ್ಟಡಗಳ ಸಮೀಕ್ಷೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ : ಡಿಕೆಶಿ

ಜನಪ್ರತಿನಿಧಿ (ಬೆಂಗಳೂರು) : ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಖಾಸಗಿ ಹಾಗೂ ಬಿಬಿಎಂಪಿಯಿಂದ ಸಮೀಕ್ಷೆ ನಡೆಸಲಾಗುವುದು. ಕಾನೂನುಬಾಹಿರ ನಿರ್ಮಾಣಗಳನ್ನು ಪತ್ತೆ ಹಚ್ಚಿ, ಪ್ರತಿ ಕಟ್ಟಡದ ಚಿತ್ರ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್‌ ಕ್ಯಾಮೆರಾಗಳಿಂದ ಮೇಲ್ವಿಚಾರಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ಅನೇಕ ಕಟ್ಟಡಗಳನ್ನು ತೆರವು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪ್ರತಿ ವಲಯದಲ್ಲಿ ಅಕ್ರಮ, ಕಳಪೆ ಗುಣಮಟ್ಟದ ಕಾಮಗಾರಿ ಹಾಗೂ ಜೀವಕ್ಕೆ ಅಪಾಯ ತರಬಹುದಾದ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.

ಮಳೆ ನೀರು ಸಮಸ್ಯೆಗಳ  ನಿರ್ವಹಣೆಗೆ ಪ್ರತ್ಯೇಕ ಸಮಿತಿ : ಮಳೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿ ಸಮಸ್ಯೆ ಎದುರಾಗುತ್ತಿರುವ ಎಲ್ಲ ಪ್ರದೇಶಗಳಲ್ಲಿ ಪರಿಹಾರಕ್ಕೆ ಯೋಜನೆ ರೂಪಿಸಿ, ಅಗತ್ಯವಿರುವೆಡೆ ಹಣಕಾಸಿನ ಅಂದಾಜು ನೀಡಲು ವಲಯವಾರು ಆಯುಕ್ತರು, ಮುಖ್ಯ ಎಂಜಿನಿಯರ್‌ಗಳು ಹಾಗೂ ಮಳೆ ನೀರುಗಾಲುವೆ ನಿರ್ವಹಣೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಒಂದು ವಾರದೊಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಕೆಶಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!