spot_img
Thursday, April 2, 2026
spot_img

ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗವಕಾಶ : ಸಂಪೂರ್ಣ ಮಾಹಿತಿ ಇಲ್ಲಿದೆ.

ಜನಪ್ರತಿನಿಧಿ (ಮಾಹಿತಿ) : ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 42 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 4, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅಪ್ಲೈ ಮಾಡಬಹುದಾಗಿದೆ.

ಖಾಲಿ ಇರುವ ಹುದ್ದೆಗಳು :
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌- RPC- 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌- HK- 12

ವಿದ್ಯಾರ್ಹತೆ:
ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್‌, ಡಿಪ್ಲೊಮಾದಲ್ಲಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ನವೆಂಬರ್‌ 4, 2024ಕ್ಕೆ ಕನಿಷ್ಠ 21 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ವಯೋಮಿತಿ ಸಡಿಲಿಕೆ:
SC/ST/ಪ್ರವರ್ಗ-1 ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:
SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಪರ್ಸನಾಲಿಟಿ ಟೆಸ್ಟ್‌

ಉದ್ಯೋಗದ ಸ್ಥಳ:
ಕರ್ನಾಟಕದಾದ್ಯಂತ.

ಅರ್ಜಿ ಹಾಕಲು ಬಯಸುವವರು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳಿಗೆ ಸುಲಭವಾಗಲೆಂದೇ ಇಲ್ಲಿನ ನೇರ ಲಿಂಕ್‌ ನ್ನು ನೀಡಲಾಗಿದೆ. ಈ ಕೆಳಗೆ ಕೊಟ್ಟಿರುವ ಲಿಂಕ್‌ ಕ್ಲಿಕ್‌ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಲಿಂಕ್ :  ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗವಕಾಶ : ಈ ಮೂಲಕ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/10/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್‌ 4, 2024

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!