spot_img
Saturday, February 14, 2026
spot_img

ಡಾ| ಬಿ.ಬಿ. ಹೆಗ್ಡೆ ಕಾಲೇಜು : ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್-2024 ಉದ್ಘಾಟನೆ

ಜನಪ್ರತಿನಿಧಿ (ಕುಂದಾಪುರ) : ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ವ್ಯವಹಾರ ಆಡಳಿತ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್, 24 ಹಾಗೂ 25 ರಂದು ನಡೆಯಲಿರುವ ನೋವೇಶನ್ ಮ್ಯಾನೇಜ್ಮೆಂಟ ಫೆಸ್ಟ್ -2024ನ್ನು ಕಾಲೇಜಿ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಬಿಬಿಎ ಕೋರ್ಸ್ ಜಾಗತಿಕವಾಗಿ ಪ್ರಾಮುಖ್ಯತೆಯನ್ನು ಪಡೆದುಕೊಂಡಿದ್ದು, ಆಡಳಿತ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿಫುಲವಾದ ಅವಕಾಶವನ್ನು ಕಲ್ಪಿಸುತ್ತಿದ್ದು ವಿದ್ಯಾರ್ಥಿಗಳು ತಮ್ಮನ್ನು ಉದ್ಯಮ, ವ್ಯವಹಾರ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಈ ಕೋರ್ಸ್ ಉಪಯುಕ್ತವಾದದ್ದು ಎಂದು ಹೇಳಿದರು. ಆ ಹಿನ್ನೆಲೆಯಲ್ಲಿ ಆಯೋಜಿಸಿರುವ ನೋವೇಶನ್ ಮ್ಯಾನೇಜ್ಮೆಂಟ್ ಫೆಸ್ಟ್ ನ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಉಪ-ಪ್ರಾಂಶುಪಾಲ ಡಾ| ಚೇತನ್ ಶೆಟ್ಟಿ ಕೋವಾಡಿ, ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ನಂದಾ ರೈ, ಸಂಯೋಜಕರಾದ ರಜತ್ ಬಂಗೇರ, ವಿಭಾಗದ ಪ್ರಾಧ್ಯಾಪಕರುಗಳಾದ ಹರೀಶ್ ಬಿ, ಪ್ರವೀಣ್ ಮೊಗವೀರ ಗಂಗೊಳ್ಳಿ, ಚೈತಾಲಿ, ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರದ್ದಾ ಆರ್. ಹಾಗೂ ಕಿರಣ್ ಮತ್ತು ಕಾಲೇಜಿನ ಬೋಧಕ- ಬೋಧಕೇತರ ವೃಂದ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ವಿದ್ಯಾರ್ಥಿಗಳಾದ ಅಕ್ಷಿತಾ ಮತ್ತು ಐಶ್ವರ್ಯ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!