spot_img
Monday, March 16, 2026
spot_img

ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಘಟಕ ಪದಗ್ರಹಣ

ಕುಂದಾಪುರ :ತುಳುನಾಡ ರಕ್ಷಣಾ ವೇದಿಕೆ ಕುಂದಾಪುರ ತಾಲೂಕು ಘಟಕ ಉದ್ಘಾಟನೆ, ನೂತನ ಪದಾಧಿಕಾರಿಗಳ ಪದಗ್ರಹಣ ಕುಂದಾಪುರದ ಪಾರಿಜಾತ ಹೋಟೆಲ್ ಸಭಾಂಗಣದಲ್ಲಿ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಸ್ರೂರು ಇಲ್ಲಿನ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಸಮಾರಂಭ ಉದ್ಘಾಟಿಸಿದರು.

ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಸಭೆಯ ಅಧ್ಯಕ್ಷತೆ ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರುಡೇಶ್ವರ್, ಅಂತರಾಷ್ಟ್ರೀಯ ಮಾನವ ಹಕ್ಕು ಆಯೋಗ ಡೆನ್ಮಾರ್ಕ್ ಇದರ ಶಿವಾನಂದ ತಲ್ಲೂರು, ಅಮೃತ್ ಕನ್ವೆನ್ಷನ್ ಸೆಂಟರ್ ಮಾರಣಕಟ್ಟೆ ಇದರ ಮಾಲಕರಾದ ಎಂ. ಪ್ರದೀಪ್ ಚಂದ್ರ ಶೆಟ್ಟಿ ಭಾಗವಹಿಸಿದ್ದರು.

ತುಳುನಾಡ ರಕ್ಷಣಾ ವೇದಿಕೆಯ ಕುಂದಾಪುರ ಘಟಕದ ಅಧ್ಯಕ್ಷರಾದ ಸತೀಶ್ ಖಾರ್ವಿ ಪದಗ್ರಹಣ ಸ್ವೀಕರಿಸಿದರು.

ವೈದ್ಯರ ಘಟಕ ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ.ರವೀಂದ್ರ ಶೆಟ್ಟಿ, ತುಳುನಾಡ ರಕ್ಷಣ ವೇದಿಕೆಯ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜ ಕೊಳಲಗಿರಿ, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಕೃಷ್ಣಕುಮಾರ್, ಜಿಲ್ಲಾ ಕಾರ್ಮಿಕ ಘಟಕ ತುಳುನಾಡ ರಕ್ಷಣಾ ವೇದಿಕೆ ಉಡುಪಿ ನಗರ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮೀ ನಗರ, ತುಳುನಾಡ ರಕ್ಷಣಾ ವೇದಿಕೆ ಯುವ ಘಟಕದ ಅಧ್ಯಕ್ಷ ವೇಣು ಪೂಜಾರಿ ಸಂತೆಕಟ್ಟೆ, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಇದರ ಹಿರಿಯ ಉಪಾಧ್ಯಕ್ಷ ಜಯರಾಮ್ ಪೂಜಾರಿ, ತುಳುನಾಡ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಅಧ್ಯಕ್ಷ ಸತೀಶ್ ಪೂಜಾರಿ ಕೀಳಂಜೆ, ತುಳುನಾಡ ರಕ್ಷಣಾ ವೇದಿಕೆ ಉಡುಪಿ, ಕಾಪು ತಾಲೂಕು ಅಧ್ಯಕ್ಷ ಹರೀಶ್ ಶೆಟ್ಟಿ ಕಾಪು, ತುಳುನಾಡ ರಕ್ಷಣಾ ವೇದಿಕೆ ಉಡುಪಿ, ಮಹಿಳಾ ಘಟಕದ ಅಧ್ಯಕ್ಷೆ ಅನುಸೂಯ ಶೆಟ್ಟಿ ಉಪಸ್ಥಿತರಿದ್ದರು.

ಹರ್ಷವರ್ಧನ್ ಖಾರ್ವಿ ಸ್ವಾಗತಿಸಿದರು. ಫ್ರಾಂಕಿ ಡಿಸೋಜ ಕೊಳಲಗಿರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರದೀಪ್ ಆವಂಜೆ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!