spot_img
Sunday, February 15, 2026
spot_img

ಒಳ ಮೀಸಲಾತಿಗೆ ವಿರೋಧ ಇಲ್ಲ | ಒಳ ಮೀಸಲಾತಿ ಪರವಾಗಿ ನಿರ್ಣಯ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ, ಎಲ್ಲರನ್ನೂ ವಿಶ್ವಾಸಕ್ಕೆ  ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ಮ ಸುಮ್ಮನೆ ಬರುವುದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಒಳಮೀಸಲಾತಿ ಕುರಿತ ಸಚಿವ ಸಂಪುಟದ ನಿರ್ಣಯಕ್ಕಾಗಿ ಇಂದು (ಮಂಗಳವಾರ) ನನ್ನನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ‌ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ‌ ಸರ್ಕಾರ ಮಾಡಲಿದೆ ಎಂದು ಹೇಳಿದರು.

ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, “ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ” ಎನ್ನುವ ನಿರ್ಣಯ ಮಾಡಿದ್ದಾಗಿದೆ. ಹೀಗಾಗಿ ಎಲ್ಲರೂ ಒಳಮೀಸಲಾತಿ ಪರವಾಗಿದ್ದಾರೆ. ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ ಎಂದು ತಿಳಿಸಿದರು.

ನಿನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವರಾದ ಹೆಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ, ಮುನಿಯಪ್ಪ ಅವರು ಎಲ್ಲರೂ ಮಾತನಾಡಿದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಸೂಕ್ತ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ. ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶಗಳ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಶನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆ ಜಾರಿ ಮಾಡಿಲ್ಲ? ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ನಾವು ಜಾರಿ ಮಾಡಿದ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಕಾಯ್ದೆಯನ್ನು ಅವರೇಕೆ ಮಾಡಲಿಲ್ಲ ಹೇಳಿ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಬಿಜೆಪಿಯ ಯಾವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ. ಇದು ನನ್ನ ಕಮಿಟ್ ಮೆಂಟ್. ರಾಜಕಾರಣಕ್ಕಾಗಿ ಇದೆಲ್ಲಾ ಮಾಡಿದ್ದಲ್ಲ. ಇದರ ಮುಂದುವರೆದ ಭಾಗವಾಗಿಯೇ ಒಳಮೀಸಲಾತಿ ಜಾರಿಗೆ ಮುಂದಾಗಿದ್ದೇವೆ. ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!