spot_img
Wednesday, January 22, 2025
spot_img

ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್‌ ಬೋರ್ಡ್‌ ನೋಟೀಸ್‌ ನೀಡಿಲ್ಲ : ಬೈರೇಗೌಡ

ಜನಪ್ರತಿನಿಧಿ (ಬೆಂಗಳೂರು) : ʻʻವಕ್ಫ್‌ ಮಂಡಳಿಗೆ ದಾನಿಗಳು ನೀಡಿದ 14,201 ಎಕರೆ ವಕ್ಫ್‌ ಆಸ್ತಿಯಿತ್ತು. ಅದರಲ್ಲಿ ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೇರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ.ʼʼ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ʻʻಹೊನವಾಡ ಗ್ರಾಮದಲ್ಲಿ 1200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುದನ್ನು ತೆಗೆಸಿದ್ದಾರೆ. ಸರಕಾರ ಅಧಿಸೂಚನೆಯೂ ಹೊರಡಿಸಿದೆ.ʼʼ ಎಂದವರು ಹೇಳಿದ್ದಾರೆ.

ʻʻಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ.ʼʼ ಎಂದವರು ಆಕ್ರೋಶ ಹೊರಹಾಕಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!