spot_img
Thursday, April 2, 2026
spot_img

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ದರ್ಶನ್‌ ಗೆ ಷರತ್ತುಬದ್ಧ ಜಾಮೀನು ಮಂಜೂರು | ದರ್ಶನ್ ಪಾಸ್ಪೋರ್ಟ್ ಕೋರ್ಟ್ ಸುಪರ್ಧಿಗೆ !

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಚಾಲೆಂಜಿಂಗ್‌ ಸ್ಟಾರ್ ದರ್ಶನ್ ತೂಗುದೀಪ ಯಾನೆ ಡಿಬಾಸ್‌ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ದರ್ಶನ್​ ಗೆ ಆರೋಗ್ಯ ಸಮಸ್ಯೆ ಇರುವುದನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್​ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಷರತ್ತುಬದ್ಧ ಜಾಮೀನು : ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಷರತ್ತುಗಳನ್ನು ವಿಧಿಸಿ ಮಂಜೂರು ಮಾಡಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ. ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ಸಲ್ಲಿಸಬೇಕು ಎಂದು ಕೋರ್ಟ್ ಹೇಳಿದೆ.

ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದೆ ಜಾಮೀನು ಮಂಜೂರು ಮಾಡಿದೆ.

ಬೆನ್ನು ಹುರಿ ಸಮಸ್ಯೆಗೆ ದರ್ಶನ್ ಗೆ ಚಿಕಿತ್ಸೆ
ಈ ಹಿಂದೆ ಕೆಳಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ದರ್ಶನ್​ರ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಬಳಿಕ ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಹೈಕೋರ್ಟ್​ನಲ್ಲಿ ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್​ನಲ್ಲಿ ದರ್ಶನ್ ಆರೋಗ್ಯ ಸಮಸ್ಯೆಯನ್ನು ಪ್ರಮುಖ ಕಾರಣವಾಗಿ ಪರಿಗಣಿಸಿ ಜಾಮೀನು ನೀಡುವಂತೆ ಮನವಿ ಮಾಡಲಾಗಿತ್ತು. ದರ್ಶನ್​ಗೆ ತೀವ್ರ ಬೆನ್ನುನೋವಿನ ಸಮಸ್ಯೆ ಇದ್ದು, ಅವರಿಗೆ ಶಸ್ತ್ರಚಿಕಿತ್ಸೆಯ ಅವಶ್ಯಕತೆ ಇದೆ. ಒಂದೊಮ್ಮೆ ಚಿಕಿತ್ಸೆ ತಡವಾದರೆ ಅವರು ಪಾರ್ಶ್ವವಾಯುವಿಗೆ ಈಡಾಗುವ ಆತಂಕ ಇದೆ ಎಂದು ವೈದ್ಯರು ನೀಡಿದ್ದ ವರದಿಯನ್ನು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!