spot_img
Saturday, July 19, 2025
spot_img

ರಾಜ್ಯೋತ್ಸವ : 50 ಮಂದಿ ಸಾಧಕರಿಗೆ ʼಸುವರ್ಣ ಸಂಭ್ರಮ ಪ್ರಶಸ್ತಿʼ : ತಂಗಡಗಿ

ಜನಪ್ರತಿನಿಧಿ (ಬೆಂಗಳೂರು) : ಕಲಾವಿದರು ಮತ್ತು ಕಲೆಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ರೋತ್ಸಾಹ ನೀಡುತ್ತಿದ್ದು, ಮುಂದಿನ ವರ್ಷದಿಂದ ಕಲಾವಿದರ ಮಾಸಾಶನ ಮೊತ್ತವನ್ನು 3 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ಎಸ್‌. ತಂಗಡಗಿ ತಿಳಿಸಿದ್ದಾರೆ.

ನವೆಂಬರ್‌ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ 50 ಪುರುಷ ಹಾಗೂ ಮಹಿಳಾ ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ.

ಈ ಪ್ರಶಸ್ತಿಗೆ ವಿಶೇಷ ಸಮಿತಿಯೆ ಸಾಧಕರನ್ನು ಆಯ್ಕೆ ಮಾಡಿದ್ದು, ಯಾರಿಗೆಲ್ಲಾ ಈ ವಿಶೇಷ ಪ್ರಶಸ್ತಿ ಲಭಿಸಲಿದೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!