spot_img
Monday, February 16, 2026
spot_img

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ʼಟಾಕ್ಸಿಕ್‌ʼ ಚಿತ್ರತಂಡಕ್ಕೆ ಎದುರಾದ ಸಂಕಷ್ಟ | ಅರಣ್ಯನಾಶ ಆರೋಪ : ಸೂಕ್ತ ಕ್ರಮಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಜನಪ್ರತಿನಿಧಿ (ಬೆಂಗಳೂರು) :  ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಸಿಮಾಗೆ ದೀಪಾವಳಿ ಸಂದರ್ಭದಲ್ಲೆ ಸಂಕಷ್ಟವೊಂದು ಎದುರಾಗಿದೆ. ಚಲನ ಚಿತ್ರ ಚಿತ್ರೀಕರಣಕ್ಕಾಗಿ ನೂರಾರು ಅರಣ್ಯ ನಾಶ ಮಾಡಿದ್ದಾರೆ ಎಂಬ ಆರೋಪ ಈಗ ಚಿತ್ರತಂಡದ ಮೇಲೆ ಕೇಳಿಬಂದಿದ್ದು, ರಾಜ್ಯ ಸರ್ಕಾರ ಚಿತ್ರ ತಂಡದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿದೆ.

ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!