spot_img
Monday, June 23, 2025
spot_img

ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನ ಪರಗಣಿಸದಂತೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆಗೆ ಸಿಎಂ ಸೂಚನೆ

ಜನಪ್ರತಿನಿಧಿ (ಬೆಂಗಳೂರು) : ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕು.‌ ಗಣಿ ಇಲಾಖೆ ಪ್ರಗತಿಯು ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 54ರಷ್ಟು ಇತ್ತು. ಪ್ರಸಕ್ತ ಸಾಲಿನಲ್ಲಿ ಶೇ.46 ರಾಜಸ್ವ ಸಂಗ್ರಹಣೆ ಆಗಿದೆ. ಅರಣ್ಯ ಇಲಾಖೆಯೊಂದಿಗಿನ ಗೊಂದಲಗಳನ್ನು ನಿವಾರಿಸಿಕೊಂಡು ರಾಜಸ್ವ ಸಂಗ್ರಹಣೆಗೆ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಗಣಿ, ಭೂವಿಜ್ಞಾನ ಹಾಗೂ ಅರಣ್ಯ ಇಲಾಖೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಪ್ರಸಕ್ತ ಸಾಲಿಗೆ ರಾಜಸ್ವ ಸಂಗ್ರಹಣೆ ಗುರಿ ₹9,000 ಕೋಟಿ, ಅಕ್ಟೋಬರ್ ವರೆಗಿನ ರಾಜಸ್ವ ಸಂಗ್ರಹಣೆ ₹4,070.22 ಕೋಟಿ. ರಾಜ್ಯದ ಅಭಿವೃದ್ಧಿಗೆ ಹಿತಾಸಕ್ತಿಗೆ ಪ್ರಾಮುಖ್ಯತೆ ನೀಡಬೇಕು. ಇದಕ್ಕೆ ಧಕ್ಕೆ ಮಾಡಿದರೆ ಸಹಿಸಲ್ಲ. ನಿಯಮಾನುಸಾರವೇ ಕ್ರಿಯಾಶೀಲತೆಯಿಂದ ಕೆಲಸ ಮಾಡಬೇಕು. ಬೇರೆ ರಾಜ್ಯಗಳಲ್ಲಿ ಕಬ್ಬಿಣದ ಅದಿರನ್ನು ಅರಣ್ಯ ಉತ್ಪನ್ನ ಎಂದು ಪರಿಗಣಿಸಿರುವುದಿಲ್ಲ. ನಮ್ಮ ರಾಜ್ಯದಲ್ಲಿ ಇದೇ ಮಾದರಿ ಅಳವಡಿಸಿಕೊಳ್ಳಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಬೇಕೆಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,400SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!