spot_img
Monday, March 16, 2026
spot_img

ಕೋಟೇಶ್ವರ: ಕಾಲೇಜು ವಾರ್ಷಿಕ ಸಂಚಿಕೆ ಅನಾವರಣ

ಕುಂದಾಪುರ: ಕಠಿಣ ಪರಿಶ್ರಮಕ್ಕೆ ಫಲ ಸಿಕ್ಕಿಯೇ ಸಿಕ್ಕುತ್ತದೆ. ಪ್ರಯತ್ನವನ್ನು ಮಾಡದೇ ಫಲಿತಾಂಶದ ಕಡೆ ಕಣ್ಣು ಹಾಯಿಸುವುದು ತರವಲ್ಲ. ಯಶಸ್ಸು ನಮ್ಮದಾಗಬೇಕಾದರೆ ಸ್ವಪ್ರಯತ್ನ ಅಷ್ಟೇ ಮುಖ್ಯವಾಗಿರುತ್ತದೆ. ಪದವಿ ಶಿಕ್ಷಣದಲ್ಲಿ ಪಠ್ಯದ ವಿಷಯಗಳಲ್ಲಿ ಪರಿಪೂರ್ಣ ಜ್ಞಾನ ಸಂಪಾದನೆಯೊಂದಿಗೆ ನಿರಂತರವಾಗಿ ಅಧ್ಯಯನಶೀಲರಾದರೆ ಉದ್ಯೋಗ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ ಎಂದು ಎಸ್.ಬಿ.ಐ. ಉಡುಪಿ ರೀಜಿನಲ್ ಮ್ಯಾನೇಜರ್ ಶೋಭಾಲತಾ ಹೇಳಿದರು.

ಅವರು ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ.ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ, ಅಂಚೆ: ಕೋಟೇಶ್ವರ ಇಲ್ಲ ತಮ್ಮ ಬ್ಯಾಂಕಿನಿಂದ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿಯಲ್ಲಿ ಕೊಡಮಾಡಲಾದ ಕುಡಿಯುವ ನೀರಿನ ಘಟಕ ಹಾಗೂ ೨೦೨೩-೨೪ ನೇ ಸಾಲಿನ ಕಾಲೇಜು ವಾರ್ಷಿಕ ಸಂಚಿಕ ಮಹರಂದವನ್ನು ಅನಾವರಣಗೊಳಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕರವರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿರುವ ಈ ಕಾಲೇಜಿಗೆ ಎಸ್.ಬಿ.ಐ. ಬ್ಯಾಂಕಿನಿಂದ ದೇಣಿಗೆ ರೂಪದಲ್ಲಿ ಕುಡಿಯುವ ನೀರಿನ ಘಟಕವನ್ನು ಒದಗಿಸಿ ಕೊಟ್ಟದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿ ವಿದ್ಯಾರ್ಥಿಗಳು ಕಾಲೇಜಿನ ಮೂಲಭೂತ ಸೌಕರ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿ ಹೇಳಿದರು.

ಸಂಚಾಲಕರಾದ ನಾಗರಾಜ ಯು ಪ್ರಸ್ತಾವಿಕ ನುಡಿಗಳನ್ನಾಡಿದರು. ನವ್ಯ ಮತ್ತು ತಂಡದವರು ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ರಾಮರಾಯ ಆಚಾರ್ಯ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ಡಾ. ವೆಂಕಟರಾಮ ಭಟ್ ವಂದಿಸಿದರು.

ಕಾಲೇಜು ವಾರ್ಷಿಕ ಸಂಚಿಕೆ ಮಕರಂದದ ಕುರಿತಾಗಿ ಸಂಪಾದಕರಾದ ನಾಗರಾಜ ವೈದ್ಯ ಎಂ. ಅಭಿಪ್ರಾಯಗಳನ್ನು ಹಂಚಿಕೊಂಡು, ಸಹಕರಿಸಿದ ಸರ್ವರಿಗೂ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!