spot_img
Friday, April 3, 2026
spot_img

ಕನ್ನಡ ರಾಜ್ಯೋತ್ಸವ : ನಾಡ ದೇವತೆ ಭುವನೇಶ್ವರಿಗೆ ಸಿಎಂ, ಡಿಸಿಎಂ ಪುಷ್ಪ ನಮನ, ಧ್ವಜಾರೋಹಣ

ಜನಪ್ರತಿನಿಧಿ (ಬೆಂಗಳೂರು) : 69ನೇ ಕನ್ನಡ ರಾಜ್ಯೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುವ ಮೂಲಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು, ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದು, ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು. ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!