spot_img
Wednesday, January 22, 2025
spot_img

ಉಡುಪಿ | ಜಿಲ್ಲೆಯಲ್ಲಿನ ಗುಡ್ಡಕುಸಿತ ಪ್ರದೇಶಗಳ ಬಗ್ಗೆ ಪರಿಶೀಲನೆ, ತಡೆಗೆ ಕ್ರಿಯಾ ಯೋಜನೆ : ಹೆಬ್ಬಾಳ್ಕರ್‌

ಜನಪ್ರತಿನಿಧಿ (ಉಡುಪಿ) : ಜಿಲ್ಲೆಯಲ್ಲಿನ ಗುಡ್ಡಕುಸಿತ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸಿ, ಗುಡ್ಡಕುಸಿತ ತಡೆಗಟ್ಟುವ ಬಗ್ಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವ ಬಗ್ಗೆ ಈಗಾಗಲೇ ಬೆಂಗಳೂರಿನ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಕಚೇರಿಯ ತಾಂತ್ರಿಕ ಸಿಬ್ಬಂದಿ ಸಮೀಕ್ಷೆ ಮಾಡಿ, ವರದಿಯೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಇಲ್ಲಿನ ಅಜ್ಜರಕಾಡು ಗಾಂಧಿ ಮೈದಾನದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇಂದು (ಶುಕ್ರವಾರ) ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಗುಡ್ಡಕುಸಿತ ತಡೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದೂ ಇದೇ ವೇಳೆ ಭರವಸೆ ನೀಡಿದರು.

ರಾಜ್ಯದ ಸರ್ಕಾರಿ ಶಾಲೆಗಳ 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ 2024-25 ನೇ ಸಾಲಿನ ಕಲಿಕಾ ಸಾಮಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲು ₹14.2 ಕೋಟಿ ವೆಚ್ಚದ ‘ಓದು ಕರ್ನಾಟಕ’ ಚಟುವಟಿಕೆಗೆ ಅನುಮೋದನೆ ನೀಡಲಾಗಿದೆ ಎಂದವರು ಹೇಳಿದರು.

ಶಾಸಕರಾದ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್. ಸೇರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!