spot_img
Saturday, February 14, 2026
spot_img

ಜಾಗತಿಕ ಮಟ್ಟದ ಹೂಡಿಕೆದಾರರನ್ನು ಬೈಂದೂರಿಗೆ ಕರೆತರುವುದು ನಮ್ಮ ಗುರಿ-ಬಿ.ವೈ.ರಾಘವೇಂದ್ರ

ಬೈಂದೂರು: ನ.1 (ಜನಪ್ರತಿನಿಧಿ ವಾರ್ತೆ) ಬೈಂದೂರು ಕ್ಷೇತ್ರದ ಸಾಂಸ್ಕೃತಿಕ ವೇದಿಕೆ ಮೂಲಕ ಅಭಿವೃದ್ಧಿ ಪರಿಕಲ್ಪನೆಯ ಉದ್ದೇಶದಿಂದ, ಜಾಗತಿಕ ಮಟ್ಟದಲ್ಲಿ ಕ್ಷೇತ್ರದವರನ್ನು ಒಗ್ಗೂಡಿಸುವ ಚಿಂತನೆಯಲ್ಲಿ ಉತ್ಸವ ಆಯೋಜಿಸಲಾಗಿದೆ. ಇಲ್ಲಿನ ಪ್ರವಾಸೋದ್ಯಮ ಅವಕಾಶಗಳನ್ನು ಪರಿಚಯಿಸುವುದು ಆ ಮೂಲಕ ಜಾಗತಿಕ ಮಟ್ಟದ ಹೂಡಿಕೆದಾರರನ್ನು ಬೈಂದೂರಿಗೆ ಕರೆತರುವುದು, ಕ್ಷೇತ್ರದ ಪ್ರತಿಭೆಗಳಿಗೆ ಅವಕಾಶ ನೀಡುವುದು ಮೂಲ ಉದ್ದೇಶವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಅವರು ನ.೧ರಂದು ಬೈಂದೂರು ಗಾಂಧಿ ಮೈದಾನದಲ್ಲಿ ಸಮೃದ್ಧ ಬೈಂದೂರು, ವಿವಿಧ ಸಂಘ ಸಂಸ್ಥೆ, ತಾಲ್ಲೂಕು ಆಡಳಿತ ಸಹಭಾಗಿತ್ವದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ‘ಬೈಂದೂರು ಉತ್ಸವ’ವನ್ನು ಉದ್ಘಾಟಿಸಿ, ಕರ್ನಾಟಕ ರಾಜ್ಯೋತ್ಸವ ರಥಯಾತ್ರೆ ಮತ್ತು ಬೈಂದೂರು ಉತ್ಸವದ ಟ್ಯಾಬ್ಲೊ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೈಂದೂರಿನಲ್ಲಿ ಮೊದಲ ಬಾರಿಗೆ ಉದ್ಯೋಗ ಸೃಷ್ಟಿಗೆ ಒತ್ತು ನೀಡುವ ಯುವಜನತೆಗೆ ಪ್ರೇರಣೆ ನೀಡುವ, ಪ್ರವಾಸೋದ್ಯಮ ಹಬ್ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಅಂತರಾಷ್ಟ್ರೀಯ ಮಟ್ಟದಲ್ಲಿ ಬೈಂದೂರನ್ನು ಗುರುತಿಸುವಂತೆ ಮಾಡುವಲ್ಲಿ ಶಾಸಕ ಗುರುರಾಜ ಗಂಟಿಹೊಳೆಯವರ ಸಂಕಲ್ಪಕ್ಕೆ ನಾವೆಲ್ಲಾ ಕೈ ಜೋಡಿಸಿದ್ದೇವೆ. ಕರ್ನಾಟಕ ಸರಕಾರವೂ ಕೂಡಾ ಈ ಉತ್ಸವಕ್ಕೆ ಸಣ್ಣ ಅನುದಾನವನ್ನು ನೀಡುವ ಮೂಲಕ ಸಂವಿಧಾನ ಬದ್ಧವಾದ ಚಾಲನೆಗೆ ಸರಕಾರ ನೀಡಿದೆ.ಅದಕ್ಕಾಗಿ ರಾಜ್ಯದ ಮುಖ್ಯಮಂತ್ರಿಗಳಿಗೆ, ಕನ್ನಡ ಸಂಸ್ಕೃತಿ ಇಲಾಖೆ ಸಚಿವರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಮಲೆನಾಡು-ಕರಾವಳಿ ಪ್ರದೇಶವನ್ನು ಜೋಡಿಸುವುದು ನಿಟ್ಟಿನಲ್ಲಿ ಪ್ರಯತ್ನಗಳು ಆಗುತ್ತಿವೆ. ರಾಷ್ಟ್ರೀಯ ಹೆದ್ದಾರಿ ೬೬ ಹೊರತುಪಡಿಸಿ ಮೂರು ರಾಷ್ಟ್ರೀಯ ಹೆದ್ದಾರಿ ೬೮ ಕಿ.ಮೀ ಸುತ್ತಳತೆಯಲ್ಲಿ ಬೈಂದೂರಿಗೆ ಬಂದು ತಲುಪುತ್ತಿವೆ. ಎನ್.ಎಚ್ ೭೬೬ಸಿ ರಾಣೆಬೆನ್ನೂರು ಬೈಂದೂರು ಸಂಪರ್ಕ ಕಲ್ಪಿಸಿದರೆ ಸಿಗಂದೂರು ಸೇತುವೆ ೫೦೦ ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗುವುದರೊಂದಿಗೆ ರಾಷ್ಟ್ರದ ಎರಡನೇ ಉದ್ದದ ಸೇತುವೆಯೆನ್ನುವ ಹೆಗ್ಗಳಿಕೆಯೊಂದಿಗೆ ಗ್ರಾಮ ಪಂಚಾಯತ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿದೆ. ಅಡುಗೋಡಿ ರಸ್ತೆ ಕೂಡಾ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆಯಾಗುತ್ತಿದ್ದು ಅದು ಕೂಡಾ ಬೈಂದೂರಿಗೆ ಸಂಪರ್ಕಿಸಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಕುಂದಾಪುರ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ ಶೆಟ್ಟಿ, ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಕೃಷ್ಣಪ್ರಸಾದ್ ಅಡ್ಯಂತಾಯ, ಸದಾನಂದ ಉಪ್ಪಿನಕುದ್ರು, ಪುಷ್ಪರಾಜ ಶೆಟ್ಟಿ, ಗೌರಿ ದೇವಾಡಿಗ, ಸುರೇಶ ಬಟ್ವಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯಕ್, ವೈದ್ಯಾಧಿಕಾರಿ ಡಾ.ಪ್ರೇಮಾನಂದ, ಬೈಂದೂರು ಉತ್ಸವ ಸಮಿತಿ ಸಹ ಸಂಚಾಲಕ ಶ್ರೀಗಣೇಶ್ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

ಸಮೃದ್ಧ ಚಾರಿಟೇಬಲ್ ಟ್ರಸ್ಟ್ ಬೈಂದೂರು ಅಧ್ಯಕ್ಷರಾದ ಬಿ.ಎಸ್.ಸುರೇಶ ಶೆಟ್ಟಿ ಸ್ವಾಗತಿಸಿದರು. ಬೈಂದೂರು ಉತ್ಸವ ನವಂಬರ್ 3ರ ತನಕ ನಡೆಯಲಿದೆ.

ಬೈಂದೂರು ಉತ್ಸವದಲ್ಲಿ ವಿಜ್ಞಾನ ಮೇಳ, ಶಿಕ್ಷಣಮೇಳ, ಕೃಷಿ ಮೇಳ, ಕರಕುಶಲ ಮೇಳ, ಸಾಹಿತ್ಯ ಮೇಳ, ಮೀನುಗಾರಿಕಾ ಮೇಳ, ವೈವಿಧ್ಯಮಯ ಮಳಿಗೆಗಳು, ಗೂಡುದೀಪ ಹಬ್ಬ, ಪ್ರಾಚ್ಯವಸ್ತು ಸಂಗ್ರಹಾಲಯ, ಕಾರ್ಟೂನ್ ಹಬ್ಬ, ಮನೋರಂಜನಾ ಪಾರ್ಕ್, ಆಹಾರ ಮೇಳ ಸಹಿತ ಹಲವು ಆಕರ್ಷಣೆಗಳು ಇರುತ್ತವೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!