spot_img
Friday, April 3, 2026
spot_img

ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಸದಸ್ಯ ದೀಪಕ್ ಕುಮಾರ್ ಶೆಟ್ಟಿ ನಿಧನ

ಕುಂದಾಪುರ: ತಾಲೂಕು ಪಂಚಾಯತ್ ಮಾಜಿ ಸದಸ್ಯ ಸಳ್ವಾಡಿ ನಿವಾಸಿ ದೀಪಕ್ ಕುಮಾರ್ ಶೆಟ್ಟಿ (58ವ) ನ.1ರಂದು ಹೃದಯಾಘಾತದಿಂದ ನಿಧನರಾದರು. ಕಾಳಾವರ ಗ್ರಾಮಪಂಚಾಯತ್ ಮಾಜಿ ಸದಸ್ಯರಾಗಿದ್ದ ಇವರು ಸಮಾಜಮುಖಿಯಾಗಿ ತೊಡಗಿಸಿಕೊಂಡಿದ್ದರು. ಕಾಂಗ್ರೆಸ್ ಪಕ್ಷದ ಕಾಳಾವರ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಎಂದು ಹೆಸರು ಪಡೆದಿದ್ದರು. ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಸಂದರ್ಭ ತನ್ನ ಕ್ಷೇತ್ರ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಬಹುತೇಕ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದರು. ಯಾವುದೇ ಅಧಿಕಾರ ಇಲ್ಲದಿದ್ದರೂ ಜನರ ಪರವಾಗಿ ನಿಲ್ಲುತ್ತಿದ್ದರು. ಅವಿವಾಹಿತರಾಗಿದ್ದ ಅವರು ದಿ.ಕೊರ್ಗಿ ಸುಂದರಾಮ್ ಶೆಟ್ಟಿ ಅವರ ಪುತ್ರ.

ಮೃತರ ಅಂತ್ಯಕ್ರಿಯೆ ಕಾಳಾವರದ ಮನೆಯ ಪರಿಸರದಲ್ಲಿ ಶುಕ್ರವಾರ ಸಂಜೆ ನಡೆಯಿತು.

ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಕಾಂಗ್ರೆಸ್ ಮುಖಂಡ ದಿನೇಶ ಹೆಗ್ಡೆ ಮೊಳಹಳ್ಳಿ ಸಹಿತ ಅನೇಕ ಗಣ್ಯರು ಮೃತರ ಅಂತಿಮ ದರ್ಶನ ಪಡೆದರು. ವಿಧಾನ ಪರಿಷತ್ ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಸಂತಾಪ ಸೂಚಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!