spot_img
Wednesday, April 1, 2026
spot_img

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಇರ್ಮಾಡಿ ಕೆ. ತಿಮ್ಮಪ್ಪ ಹೆಗ್ಡೆ ನಿಧನ

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳೆದ ೩೫ ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಸಹಕಾರಿ ಮುಖಂಡರಾದ ಇರ್ಮಾಡಿ ಕೆ. ತಿಮ್ಮಪ್ಪ ಹೆಗ್ಡೆ (80ವ) ಅಲ್ಪಕಾಲದ ಅನಾರೋಗ್ಯದಿಂದ ನ.3ರಂದು ಉಪ್ಪಿನಕೋಟೆಯ ಸ್ವಗೃಹದಲ್ಲಿ ನಿಧನರಾದರು.

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಭಿವೃದ್ದಿಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಅವರು ಈ ಸಂಘವನ್ನು ಅವಿಭಜಿತ ದ,ಕ ಜಿಲ್ಲೆ ಗಮನ ಸಳೆಯುವಂತೆ ಕಟ್ಟಿ ಬೆಳೆಸಿದ್ದರು. ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘ 5 ಶಾಖೆಗಳಿಂದ 8 ಶಾಖೆಗಳಿಗೆ ವಿಸ್ತರಣೆಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಎಲ್ಲ ಶಾಖೆಗಳಿಗೂ ಸ್ವಂತ ಕಟ್ಟಡ ಕಲ್ಪಿಸಿದ್ದರು. ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, ಎಸ್.ಸಿ.ಡಿ.ಸಿಸಿ ಬ್ಯಾಂಕ್ ಪ್ರಶಸ್ತಿ, ರಾಜ್ಯ ಮಟ್ಟದ ಉತ್ತಮ ಸಹಕಾರಿ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು. ಚೇರ್ಕಾಡಿ ಶಾರದಾ ಪ್ರೌಢಶಾಲೆಯ ಶಾಲಾಬಿವೃದ್ಧಿ ಸಮಿತಿ ಸದಸ್ಯರಾಗಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಇಬ್ಬರು ಪುತ್ರರು ಮತ್ತು ಪುತ್ರಿಯರನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!