spot_img
Thursday, April 2, 2026
spot_img

ಮವಿಸಕಂ : ಕುಂದಾಪುರದಲ್ಲಿ ವಿದ್ಯುತ್‌ ಕಂಬ ಹತ್ತುವ ಉಚಿತ ತರಬೇತಿ !

ಜನಪ್ರತಿನಿಧಿ (ಬೆಂಗಳೂರು) : ಕವಿಪ್ರನಿನಿ.,ಯಿಂದ ರಾಜ್ಯದ ಎಲ್ಲಾ ಎಸ್ಕಾಂಗಳಿಗೆ ಕಿರಿಯ ಮಾರ್ಗದಾಳು ನೇಮಕಾತಿ ಸಂಬಂಧಿತ ಉದ್ಯೋಗ ಪ್ರಕಟಣೆಯನ್ನು ಉಲ್ಲೇಖದ ಪತ್ರದಲ್ಲಿ ಹೊರಡಿಸಿದ್ದು, ಸದ್ಯದಲ್ಲಿಯೇ ನೇಮಕಾತಿ ಪ್ರಕ್ರಿಯೆಯು ಪ್ರಾರಂಭಗೊಳ್ಳುವುದರಿಂದ, ಸ್ಥಳೀಯರಿಗೆ ಉದ್ಯೋಗವಕಾಶ ಕಲ್ಪಿಸುವ ಸಲುವಾಗಿ ತರಬೇತಿಯನ್ನು ಮೆಸ್ಕಾಂ, ಕುಂದಾಪುರ ವಿಭಾಗದ ವತಿಯಿಂದ ದಿನಾಂಕ 11.11.2024 ರಿಂದ 13.11.2024 ರವರೆಗೆ ಪ್ರತಿದಿನ ಬೆಳಿಗ್ಗೆ 09:00 ರಿಂದ 12:30 ರವರೆಗೆ ಕುಂದಾಪುರದ ಗಾಂಧಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಭ್ಯರ್ಥಿಗಳು ಭಾವಚಿತ್ರ ಇರುವ ಗುರುತಿನ ಚೀಟಿಯೊಂದಿಗೆ (ಆಧಾರ್ ಪ್ರತಿ) ಕುಂದಾಪುರದ ಗಾಂಧಿ ಮೈದಾನದಲ್ಲಿ ಹಾಜರಾಗುವಂತೆ ಅಧಿಸೂಚನೆಯಲ್ಲಿ ಹೇಳಲಾಗಿದೆ. ತರಬೇತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು S.S.L.C. ತೇರ್ಗಡೆಯಾಗಿರಬೇಕು.

ನೇಮಕಾತಿಯು ಅಭ್ಯರ್ಥಿಯ ಅಂಕ ಮತ್ತು ದೈಹಿಕ ಸಾಮರ್ಥ್ಯದ ಮೇಲೆ ಅವಲಂಬಿತವಾಗಿರುತ್ತದೆ. ತರಬೇತಿಯ ಅವಧಿಯಲ್ಲಿ ಯಾವುದೇ ಉಚಿತ ಸೌಲಭ್ಯಗಳಿರುವುದಿಲ್ಲ. ಈ ತರಬೇತಿಯು ನೇಮಕಾತಿಯ ಭಾಗವಾಗಿರುವುದಿಲ್ಲ ಎಂದು ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಕಾರ್ಯ ಮತ್ತು ಪಾಲನಾ ವಿಭಾಗ ಮವಿಸಕಂ, ಕುಂದಾಪುರ ಯಶವಂತ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!