spot_img
Wednesday, April 1, 2026
spot_img

ನಾಳೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗ್ತೇನೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ(ಬುಧವಾರ) ಮೈಸೂರಿನಲ್ಲಿ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು(ಮಂಗಳವಾರ) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಂಯ್ಯನ ಅವರಿಗೆ ಲೋಕಾಯುಕ್ತ ಪೊಲೀಸರು ಸೋಮವಾರ ನೋಟಿಸ್ ಜಾರಿ ಮಾಡಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ನವೆಂಬರ್ 6ರಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ 40 ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಪ್ರಕರಣವೊಂದರ ಆರೋಪಿಯಾಗಿ ವಿಚಾರಣೆ ಎದುರಿಸಬೇಕಾಗಿ ಬಂದಿದೆ.

ಪ್ರಕರಣ ಸಂಬಂಧ ಈಗಾಗಲೇ ಲೋಕಾಯುಕ್ತ ಎಲ್ಲಾ ಆರೋಪಿಗಳ ವಿಚಾರಣೆ ಮುಗಿಸಿದ್ದು, ಸಿದ್ದರಾಮಯ್ಯನವರ ವಿಚಾರಣೆಯೊಂದೇ ಬಾಕಿ ಇತ್ತು. ಇದೀಗ ಎ1 ಆರೋಪಿಗೂ ಸಹ ಲೋಕಾಯುಕ್ತ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!