spot_img
Wednesday, April 1, 2026
spot_img

ಜಾರ್ಖಂಡ್‌ ನಲ್ಲಿ ಬರೋಬ್ಬರಿ 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ !

ಜನಪ್ರತಿನಿಧಿ (ರಾಂಚಿ) : ಜಾರ್ಖಂಡ್‌ನಲ್ಲಿ ತನ್ನ ನಾಯಕರ ಸಾಮೂಹಿಕ ವಲಸೆಯನ್ನು ತಡೆಗಟ್ಟಲು ಬಿಜೆಪಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂದು(ಮಂಗಳವಾರ) ಬರೋಬ್ಬರಿ 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದೆ.

ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರಗಳನ್ನು ಸಲ್ಲಿಸಿದ 30 ನಾಯಕರನ್ನು ಬಿಜೆಪಿ ಇಂದು ಉಚ್ಚಾಟಿಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರ ನಿರ್ದೇಶನದಂತೆ, ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಡಾ.ಪ್ರದೀಪ್ ವರ್ಮಾ ಅವರು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಬಂಡಾಯ ನಾಯಕರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ.

ಪಕ್ಷದ ನೀತಿಗಳಿಗೆ ವಿರುದ್ಧವಾಗಿ ನಡೆದುಕೊಂಡ ಚಂದ್ರಮಾ ಕುಮಾರಿ, ಕುಂಕುಮ್ ದೇವಿ, ಜೂಲಿ ಯಾದವ್ ಸೇರಿದಂತೆ 30 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!