spot_img
Wednesday, April 1, 2026
spot_img

ಕುಂದಾಪುರ – ಸಿದ್ದಾಪುರ ಹೆದ್ದಾರಿ ಮೇಲ್ದರ್ಜೆಗೇರಿಸುವಂತೆ ಮಂಜುನಾಥ ಭಂಡಾರಿ ಮನವಿ

ಜನಪ್ರತಿನಿಧಿ (ಕುಂದಾಪುರ) : ಕುಂದಾಪುರ-ಸಿದ್ದಾಪುರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೇಗೇರಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಿದ್ದಾರೆ.

ಬಸ್ರೂರು ಮೂರುಕೈಯಿಂದ ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯ ಪ್ರಮುಖ ಸಂಪರ್ಕ ಕೊಂಡಿ ಕುಂದಾಪುರ ಸಿದ್ದಾಪುರ ರಾಜ್ಯ ಹೆದ್ದಾರಿ ಅಗಲೀಕರಣದ ಬೇಡಿಕೆ ನೆನೆಗುದಿಗೆ ಬಿದ್ದಿದ್ದು, ಸಿದ್ದಾಪುರ, ಅಂಪಾರು ಪೇಟೆ ಜಂಕ್ಷನ್ ಅಗಲೀಕರಣ ಹೊರತುಪಡಿಸಿ ರಾಜ್ಯ ಹೆದ್ದಾರಿ ಇಂದಿಗೂ ಗತ ಕಾಲದಲ್ಲೇ ಮುಂದುವರಿದಿದೆ. ಚತುಷ್ಪಥ ಹೆದ್ದಾರಿ ನಿರ್ಮಾಣ ವೇಳೆ ಕುಂದಾಪುರವನ್ನು ಸಂಪರ್ಕಿಸುವ ಈ ಹೆದ್ದಾರಿಯನ್ನು ರಾಜ್ಯ ಆಗಲೀಕರಣಗೊಳಿಸಬೇಕೆಂಬ ನಾಗರಿಕ ಹೋರಾಟ ಸಮಿತಿಯ ಬೇಡಿಕೆಗೆ ಈವರೆಗೆ ಸ್ಪಂದನೆ ಇಲ್ಲದಂತಾಗಿದೆ.

“ಹೆದ್ದಾರಿಯ ಆರಂಭಿಕ ಸ್ಥಳ ಬಸ್ರೂರು ಮೂರುಕೈಯಿಂದ ಅಂಪಾರುವರೆಗಿನ ಹೆದ್ದಾರಿ ಇಕ್ಕಟ್ಟು-ಬಿಕ್ಕಟ್ಟಿಗೆ ಕಾರಣವಾಗಿದೆ. ಅಗಲ ಕಿರಿದಾಗಿರುವುದು, ಹೆಚ್ಚುತ್ತಿರುವ ವಾಹನ ದಟ್ಟಣೆ ಪೇಟೆಗಳು ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಘನ ವಾಹನಗಳು ಎಚ್ಚರದಿಂದ ಪಯಣಿಸಬೇಕಾದ ಅನಿವಾರ್ಯತೆ ಇದೆ.

ಕೋಟೇಶ್ವರ- ಹಾಲಾಡಿ-ವಿರಾಜಪೇಟೆ ಹೆದ್ದಾರಿಯೂ ಅಗಲೀಕರಣವಾಗಿದೆ. ಸಿದ್ದಾಪುರ- ಕುಂದಾಪುರ ರಾಜ್ಯ ಹೆದ್ದಾರಿ ಇನ್ನೂ ಓಬಿರಾಯನ ಕಾಲದಲ್ಲಿದೆ. ಶಿವಮೊಗ್ಗ ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಇದಾಗಿದ್ದರೂ ಈವರೆಗೆ ಅಭಿವೃದ್ಧಿ ಕಂಡಿಲ್ಲ, ರಸ್ತೆಯ ಇಕ್ಕೆಲಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅತಿಕ್ರಮಣವನ್ನು ತಡೆಯದ ಇಲಾಖೆ ಅಧಿಕಾರಿಗಳ ವೈಫಲ್ಯತೆಯಿಂದಾಗಿ, ಮಳೆಗಾಲದಲ್ಲಿ ರಸ್ತೆಯ ಮೇಲೆ ಶೇಖರಿಸಲ್ಪಟ್ಟ ನೀರಿನಿಂದ ಉಂಟಾದ ಆಳವಾದ ಹೊಂಡಗಳಿಂದ ಹಾಗೂ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ನಾಗರಿಕರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾಗಿರುವುದಾಗಿ ವರದಿಯಾಗಿದೆ.

ಆದ್ದರಿಂದ ಕುಂದಾಪುರ-ಸಿದ್ದಾಪುರ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿ, ರಸ್ತೆ ಅಗಲೀಕರಣ ಕಾಮಗಾರಿಯನ್ನು ಪ್ರಾರಂಭಿಸಲು ಆದೇಶಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮನವಿ ಮಾಡಿದ್ದಾರೆ.

ಈ ರಾಜ್ಯ ಹೆದ್ದಾರಿಯ ಬಗ್ಗೆ ಜನಪ್ರತಿನಿಧಿ ಪತ್ರಿಕೆ ಕಳೆದ ಆಗಸ್ಟ್ 29.2024 ರಂದೇ ವರದಿ ಪ್ರಕಟಿಸಿತ್ತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!