spot_img
Wednesday, April 1, 2026
spot_img

ದೆಹಲಿ ರೀತಿಯಲ್ಲಿ ರಾಜ್ಯದಲ್ಲಿ ಕೂಡ ರೈತರು ವಕ್ಫ್ ಬೋರ್ಡ್ನಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ : ಜಗದಾಂಬಿಕಾ ಪಾಲ್

ಜನಪ್ರತಿನಿಧಿ (ವಿಜಯಪುರ) : ಕರ್ನಾಟಕದಲ್ಲಿ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪರಿಶೀಲನೆಗಾಗಿ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಇಂದು(ಗುರುವಾರ) ವಿಜಯಪುರಕ್ಕೆ ಭೇಟಿ ನೀಡಲಿದ್ದಾರೆ.

ಜಿಲ್ಲೆಯ ರೈತರ ಅಹವಾಲುಗಳನ್ನು ಸ್ವೀಕರಿಸುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ‘ವಕ್ಫ್ ಕಾಯ್ದೆಗೆ-2024’ಕ್ಕೆ ತಿದ್ದುಪಡಿ ತರಲು ಹೊರಟಿದೆ. ಕರ್ನಾಟಕದಲ್ಲಿನ ಸಮಸ್ಯೆಗಳ ಬಗ್ಗೆ ಸಂಸದ ತೇಜಸ್ವಿ ಸೂರ್ಯ ನನ್ನ ಗಮನ ಸೆಳೆದಿದ್ದರು. ದೆಹಲಿ ರೀತಿಯಲ್ಲಿ ರಾಜ್ಯದಲ್ಲಿ ಕೂಡ ರೈತರು ವಕ್ಫ್ ಬೋರ್ಡ್​ನಿಂದ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದರು.

ರಾಜ್ಯದ ರೈತರ ಸಮಸ್ಯೆಗಳನ್ನು ಆಲಿಸುವುದಕ್ಕೆಂದೇ ಕರ್ನಾಟಕಕ್ಕೆ ಬಂದಿದ್ದೇನೆ. ಇಲ್ಲಿನ ರೈತರು ದಶಕಗಳ ಕಾಲ ಉಳುಮೆ ಮಾಡಿದ ಜಮೀನುಗಳನ್ನು ವಕ್ಫ್ ಬೋರ್ಡ್ ಏಕಾಏಕಿ ತನ್ನದೆಂದು ಹೇಳುತ್ತಿದೆ. ರೈತರು ತಮ್ಮ ಆಸ್ತಿ ಪತ್ರದ ವಿವರಗಳನ್ನು ತಂದಿದ್ದಾರೆ. ರೈತರ ಹೆಸರಲ್ಲಿರುವ ಭೂ ದಾಖಲೆ ವಿವರ ನೀಡುತ್ತಿದ್ದಾರೆ. ರೈತರ ಅಹವಾಲು ಸ್ವೀಕರಿಸುತ್ತೇನೆ ಎಂದರು.

ಜಗದಾಂಬಿಕಾ ಪಾಲ್ ಹೇಳಿದ್ದೇನು?

ಕಳೆದ 60-70 ವರ್ಷಗಳಿಂದ ಕೃಷಿ ಮಾಡುತ್ತಿರುವ ಭೂಮಿ ಮೇಲೆ ವಕ್ಫ್ ಬೋರ್ಡ ಹಕ್ಕು ಸಾಧಿಸಲು ಹೊರಟಿದೆ. ಹೀಗಾಗಿ ರೈತರು ಪ್ರತಿಭಟಿಸುತ್ತಿದ್ದಾರೆ. ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದು, ವಿಜಯಪುರ ಜಿಲ್ಲೆಗೂ ಭೇಟಿ ನೀಡುತ್ತಿದ್ದೇನೆ. ಕೇವಲ ರೈತರ ಕೃಷಿ ಭೂಮಿ ಮಾತ್ರವಲ್ಲ, ಪ್ರಾಚ್ಯವಸ್ತು ಇಲಾಖೆಯ ಪಾರಂಪರಿಕ ತಾಣಗಳನ್ನು ಸಹ ವಕ್ಫ್ ತನ್ನದೆಂದು ಪ್ರತಿಪಾದಿಸುತ್ತಿದೆ. ಈ ಬಗ್ಗೆ ಸಹ ಮಾಹಿತಿ ಪಡೆಯಲಿದ್ದೇನೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಸತ್ಯಾಸತ್ಯತೆ ತಿಳಿದು ವರದಿ ನೀಡುತ್ತೇನೆ ಎಂದು ಹೇಳಿದರು.

ರೈತರ ವಿವಿಧ ಸಂಘಟನೆಗಳನ್ನು ಭೇಟಿ ಮಾಡುತ್ತೇವೆ. ಹಲವಾರು ರೈತ ಸಂಘಟನೆಗಳು ಈಗಾಗಲೇ ಪತ್ರಗಳನ್ನು ಸಲ್ಲಿಸಿವೆ. ನೊಂದ ಎಲ್ಲ ರೈತರನ್ನು ಭೇಟಿ ಮಾಡಲು ಬಂದಿದ್ದೇನೆ ಎಂದರು.

ಹುಬ್ಬಳ್ಳಿಯ ಖಾಸಗಿ ಹೊಟೆಲ್​​ನಲ್ಲಿ ಅಹವಾಲು ಸ್ವೀಕಾರ ನಡೆಯಲಿದೆ. ಮನವಿ ಸ್ವೀಕಾರ ಮಾಡಿ ರೈತರ ಜೊತೆ ಸಭೆ ನಡೆಸುವ ನಿರೀಕ್ಷೆ ಇದೆ. ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಕೂಡ ಭಾಗವಹಿಸಲಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!