spot_img
Wednesday, April 1, 2026
spot_img

ಕುಂದಾಪುರ: ವೈದ್ಯಾಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿ: ಕಠಿಣ ಕ್ರಮಕ್ಕೆ ಸರಕಾರಿ ವೈದ್ಯಾಧಿಕಾರಿಗಳ ಸಂಘ ಡಿವೈ‌ಎಸ್‌ಪಿಗೆ ಮನವಿ

ಕುಂದಾಪುರ, ನ.3ರಂದು ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ತುರ್ತುಚಿಕಿತ್ಸಾ ವೈದ್ಯಾಧಿಕಾರಿ ಡಾ.ಮೂರ್ತಿರಾಜ್ ಅವರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದ್ದು ಈ ಘಟನೆಯನ್ನು ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸಿದೆ.

ಕರ್ನಾಟಕ ವೈದ್ಯೋಪಚಾರ ಸಿಬ್ಬಂದಿಯ ಮೇಲೆ ಹಿಂಸಾಚಾರ ಮತ್ತು ವೈದ್ಯೋಪಚಾರ ಸಂಸ್ಥೆಗಳ ಆಸ್ತಿಗೆ ಹಾನಿ ಮಾಡುವುದನ್ನು ನಿಷೇಧಿಸುವ ಅಧಿನಿಯಮ ೨೦೦೯ರ ಅನ್ವಯ ಈ ಘಟನೆಯ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಂಘದ ಪದಾಧಿಕಾರಿಗಳು ಕುಂದಾಪುರ ಉಪವಿಭಾಗದ ಪೊಲೀಸ್ ಉಪಧೀಕ್ಷಕರಿಗೆ ಮನವಿ ಸಲ್ಲಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!