spot_img
Thursday, December 5, 2024
spot_img

ಜಮೀಯತುಲ್ ಫಲಾಹ್ ಕುಂದಾಪುರ: ಅಂಗನವಾಡಿ ಪುಟಾಣಿಗಳಿಗೆ ಸಮವಸ್ತ್ರ ವಿತರಣೆ

ಕುಂದಾಪುರ: ಕುಂದಾಪುರದ ಫೆರಿ ರಸ್ತೆಯಲ್ಲಿರುವ ಅಂಜುಮಾನ್ ಶಾಲೆಯ ಅಂಗನವಾಡಿ ಕೇಂದ್ರದ 22 ಮಕ್ಕಳಿಗೆ ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕದ ವತಿಯಿಂದ ಎರಡು ಜೊತೆ ಸಮವಸ್ತ್ರಗಳನ್ನು ವಿತರಿಸಲಾಯಿತು.

ಅಂಗನವಾಡಿ ಮೇಲ್ವಿಚಾರಕಿ ಲಲಿತಾ ಮಾತನಾಡಿ ಅಂಗನವಾಡಿ ಕಾರ್ಯಕರ್ತೆ ಸರಿತಾ ಅವರ ಪ್ರಯತ್ನದಿಂದಾಗಿ ಈ ಅಂಗನವಾಡಿಯಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು ಇದರ ಫಲವಾಗಿ ಈ ಅಂಗನವಾಡಿಯಲ್ಲಿ ೨೨ ಮಕ್ಕಳು ಕಲಿಯುತ್ತಿದ್ದಾರೆ. ಪ್ರಸ್ತುತ ಸರಕಾರಿ ಅಂಗನವಾಡಿಗಳಿಗೆ ಸಂಘ ಸಂಸ್ಥೆ ಮತ್ತು ದಾನಿಗಳಿಂದ ನೆರವಿನ ಸಹಕಾರ ಅತ್ಯಗತ್ಯವಾಗಿದೆ, ಈ ನಿಟ್ಟಿನಲ್ಲಿ ಜಮೀಯತುಲ್ ಫಲಾಹ್ ಸಂಸ್ಥೆಯ ಈ ಸಹಕಾರ ಶ್ಲಾಘನೀಯ ವಾದದ್ದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಮೀಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಅವರು ಸಮವಸ್ತ್ರ ವಿತರಿಸಿ ಮಾತನಾಡಿ ರಾಜ್ಯದಲ್ಲಿ ವರ್ಷಕ್ಕೆ ಸುಮಾರು 3 ಲಕ್ಷ ಮಕ್ಕಳು ಅಂಗನವಾಡಿಯಿಂದ ಒಂದನೇ ತರಗತಿಗೆ ದಾಖಲಾಗುತ್ತಿದ್ದು ಅದರಲ್ಲಿ ಸರಕಾರಿ ಶಾಲೆಗೆ ಹೋಗುವ ಮಕ್ಕಳ ಸಂಖ್ಯೆ ಕೇವಲ ಐವತ್ತು ಸಾವಿರ ಮಾತ್ರ. ಮುಂದಿನ ದಿನಗಳಲ್ಲಿ ಎಲ್ಲಾ ಮಕ್ಕಳು ಸರಕಾರಿ ಶಾಲೆಗೆ ಸೇರುವಂತಾಗಬೇಕು ಈ ನಿಟ್ಟಿನಲ್ಲಿ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

ಜ.ಫ ಕಾರ್ಯದರ್ಶಿ ಹಾಗೂ ಪುರಸಭಾ ಸದಸ್ಯರಾದ ಮುಜಾವರ್ ಅಬು ಮೊಹಮ್ಮದ್ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ವೇದಿಕೆಯಲ್ಲಿ ಜ.ಫ ಸದಸ್ಯರಾದ ಖತೀಬ್ ಅಶ್ಪಾಕ್, ಅಬ್ದುಲ್ ರಜಾಕ್ ಬೀಜಾಡಿ , ಆಶಾ ಕಾರ್ಯಕರ್ತೆ ಮಾಲತಿ, ತಾಯಂದಿರ ಸಮಿತಿ ಅಧ್ಯಕ್ಷೆ ಶ್ರೀಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರ ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಸರಿತಾ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!