spot_img
Thursday, December 5, 2024
spot_img

ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ನೆಂಪು ಡಾ.ವೆಂಕಟರಾಮ್ ಭಟ್ ಅಧಿಕಾರ ಸ್ವೀಕಾರ

ಕುಂದಾಪುರ: ಕೋಟೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ.ವೆಂಕಟರಾಮ್ ಭಟ್ ಅವರು, ಇದೀಗ ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಹೊಸ ಜವಾಬ್ದಾರಿ ಹೊತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆಗೆ ಸಹೋದ್ಯೋಗಿಗಳಾದ ಗಂಗಾರಾಜು, ಪ್ರೊಫೆಸರ್ ಶೇಖರ್ ಬಿ., ಶ್ರೀಕಾಂತ್, ರಾಜೇಂದ್ರ, ಸಂದೇಶ್ ಶೆಟ್ಟಿ, ಶ್ರೀಮತಿ ಶೈಲಜಾ, ವಿನಯ್ ಅವರು ಸನ್ಮಾನಿಸಿ ಗೌರವಿಸಿದರು.

ಡಾ. ವೆಂಕಟರಾಮ್ ಭಟ್ ಅವರು ಕೇವಲ ವಾಣಿಜ್ಯ ಶಾಸ್ತ್ರದ ಅಧ್ಯಾಪನಕ್ಕೆ ಸೀಮಿತರಾಗಿರದೆ, ಉತ್ತಮ ಆಡಳಿತಗಾರರಾಗಿ, ವಿದ್ಯಾರ್ಥಿಗಳಿಗೆ ಪ್ರೇರಕ ಶಕ್ತಿಯಾಗಿ ಮತ್ತು ತರಬೇತುದಾರರಾಗಿಯೂ ಹೆಸರುವಾಸಿಯಾಗಿದ್ದಾರೆ. ಅವರ ವಿದ್ಯಾರ್ಹತೆಗಳ ಪಟ್ಟಿ ಅವರ ಸಾಮರ್ಥ್ಯವನ್ನು ಸಾರುತ್ತದೆ. ವಾಣಿಜ್ಯ ಶಾಸ್ತ್ರದಲ್ಲಿ ಪಿ‌ಎಚ್.ಡಿ ಪದವಿ, ಪಿ.ಜಿ.ಡಿ.ಎಚ್.ಆರ್.ಎಂ ಮತ್ತು ಪಿ.ಜಿ.ಡಿ.ಎಸ್.ಬಿ.ಎಸ್.ಎ ಪದವಿಗಳು ಅವರ ಶೈಕ್ಷಣಿಕ ಹಿನ್ನೆಲೆಯನ್ನು ಬಲಪಡಿಸಿವೆ.

ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಶಿಕ್ಷಕರಾಗಿ ಸಂಶೋಧಕರಾಗಿ ವಿದ್ಯಾರ್ಥಿಗಳನ್ನು ಪ್ರಭಾವಿಸಿದ್ದಾರೆ. ವಾಣಿಜ್ಯ ಶಾಸ್ತ್ರವನ್ನು ವಿದ್ಯಾರ್ಥಿಗಳಿಗೆ ಸರಳವಾಗಿ ಮತ್ತು ಆಸಕ್ತಿದಾಯಕವಾಗಿ ತಿಳಿಸುವಲ್ಲಿ ಅವರು ನಿಪುಣರು. ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಪ್ರೇರೇಪಿಸುವ ಅವರ ಸಾಮರ್ಥ್ಯ ಅನನ್ಯ. ವಿವಿಧ ಕ್ಷೇತ್ರಗಳಲ್ಲಿ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣರಾಗಿದ್ದಾರೆ. ಶಿಕ್ಷಣ ಕ್ಷೇತ್ರದ ಸಂಘಟಕರಾಗಿ ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದ ವಿಚಾರ ಸಂಕಿರಣ ಸಂಘಟಿಸಿದ್ದಾರೆ. ಇದೀಗ ಶಂಕರನಾರಾಯಣ ಕಾಲೇಜಿನ ಪ್ರಾಂಶುಪಾಲರಾಗಿ ಅಧಿಕಾರ ಸ್ವೀಕರಿಸಿ, ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಕಂಕಣಬದ್ಧರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!