spot_img
Wednesday, April 1, 2026
spot_img

ನಕಲಿ ಸುದ್ದಿ ಹರಡಿದ ಆರೋಪ : ಸಂಸದ ತೇಜಸ್ವೀ ಸೂರ್ಯ, ಕನ್ನಡ ನ್ಯೂಸ್‌ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್ ಐಆರ್ !

ಜನಪ್ರತಿನಿಧಿ (ಬೆಂಗಳೂರು) : ರೈತನ ಆತ್ಮಹತ್ಯೆಗೂ ವಕ್ಫ್‌ ಬೋರ್ಡ್‌ನ ಭೂವಿವಾದಕ್ಕೂ ಸಂಬಂಧ ಕಲ್ಪಿಸಿ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲವು ಕನ್ನಡ ನ್ಯೂಸ್‌ ಪೋರ್ಟಲ್‌ಗಳ ಸಂಪಾದಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ನಿನ್ನೆ(ಗುರುವಾರ) ತಮ್ಮ ಎಕ್ಸ್ ಖಾತೆಯಲ್ಲಿ ಸುದ್ದಿ ಪೋರ್ಟಲ್‌ಗಳ ಸುದ್ದಿಯನ್ನು ಹಂಚಿಕೊಂಡ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಹಾವೇರಿ ಜಿಲ್ಲೆಯ ರೈತರೊಬ್ಬರು ತಮ್ಮ ಭೂಮಿಯನ್ನು ವಕ್ಪ್ ಮಂಡಳಿ ಸ್ವಾಧೀನಪಡಿಸಿಕೊಂಡಿದ್ದಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಅಲ್ಪಸಂಖ್ಯಾತ ವರ್ಗದವರನ್ನು ಖುಷಿಪಡಿಸುವ ತರಾತುರಿಯಲ್ಲಿ, ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಕರ್ನಾಟಕದಲ್ಲಿ ದುರಂತ ತಂದೊಡ್ಡಿದ್ದಾರೆ. ದಿನಗಳೆದಂತೆ ರೈತರು, ಹಿಂದೂಗಳ ಬದುಕು ದುಸ್ತರವಾಗುತ್ತಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದರು.

ಹಾವೇರಿ ಜಿಲ್ಲಾ ಪೊಲೀಸರು ನೀಡಿದ ದೂರಿನ ಆಧಾರದ ಮೇಲೆ, ಕಲಂ 353 (2) ಅಡಿಯಲ್ಲಿ ಕನ್ನಡ ದುನಿಯಾ ಇ-ಪೇಪರ್ ಮತ್ತು ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರು ಹಾಗೂ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ (ಭಾರತೀಯ ನ್ಯಾಯ ಸಂಹಿತೆಯ (BNS).

ವಿವಿಧ ಗುಂಪುಗಳ ನಡುವೆ ದ್ವೇಷ, ದ್ವೇಷದ ಭಾವನೆಗಳನ್ನು ಸೃಷ್ಟಿಸಲು ಅಥವಾ ಉತ್ತೇಜಿಸಲು ಹೇಳಿಕೆಗಳನ್ನು ಮಾಡುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಸಿಇಎನ್ (ಸೈಬರ್ ಕ್ರೈಮ್, ಆರ್ಥಿಕ ಅಪರಾಧಗಳು, ಮಾದಕ ದ್ರವ್ಯ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!