spot_img
Thursday, April 2, 2026
spot_img

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ. ಸಮುದಾಯದ ವಿದ್ಯಾರ್ಥಿಗಳ ಪ್ರೋತ್ಸಾಹಧನ 2 ಲಕ್ಷಕ್ಕೆ ಹೆಚ್ಚಳ | ಎಂಬಿಬಿಎಸ್‌ ಆಕಾಂಕ್ಷಿಗಳ ಮೊದಲ ವರ್ಷದ ಶುಲ್ಕ ಸರ್ಕಾರವೇ ಭರಿಸಲಿದೆ : ಮಹಾದೇವಪ್ಪ

ಜನಪ್ರತಿನಿಧಿ (ಬೆಂಗಳೂರು) : ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ. / ಐ.ಐ.ಎಂ. / ಐ.ಐ.ಎಸ್‌.ಸಿ. / ಎನ್‌.ಐ.ಟಿ. ಮುಂತಾದ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1 ಲಕ್ಷದಿಂದ ರೂ. 2 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳು ಇನ್ನಷ್ಟು ಶೈಕ್ಷಣಿಕ ಸಾಧನೆ ಮಾಡಲು ಸಹಕಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌. ಸಿ. ಮಹದೇವಪ್ಪ ಅವರು ತಿಳಿಸಿದ್ದಾರೆ.

ಇನ್ನು, ಪಿಯುಸಿಯಲ್ಲಿ ಶೇಕಡ 95 ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ನೀಟ್‌ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೆ ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್‌ ಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಮೊದಲನೆ ವರ್ಷದ ಕಾಲೇಜು ಶುಲ್ಕ ರೂ. 25 ಲಕ್ಷ ಗಳನ್ನು ಸರ್ಕಾರವೇ ಭರಿಸಲಿದೆ.

ಅಲ್ಲದೇ, ಇದೇ ವಿದ್ಯಾರ್ಥಿಗಳು ಎಂಬಿಬಿಎಸ್‌ ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಮತ್ತೆ ರೂ. 25 ಲಕ್ಷ ಪ್ರೋತ್ಸಾಹ ಧನವನ್ನು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!