spot_img
Friday, April 3, 2026
spot_img

ಉಡುಪಿ | ಜಿಲ್ಲೆಯ ಮೂರು ಕಡೆಗಳಲ್ಲಿ ರೈತರ ನೊಂದಣಿ / ಭತ್ತ ಖರೀದಿ ಕೇಂದ್ರಗಳ ಆರಂಭ : ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ

ಜನಪ್ರತಿನಿಧಿ (ಉಡುಪಿ) : ಕೇಂದ್ರ ಸರಕಾರವು 2024-25 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಸಾಮಾನ್ಯ ದರ ರೂ.2300/- ಹಾಗೂ ಭತ್ತ ಗ್ರೇಡ್ ‘ಎ’ ವಿಧಕ್ಕೆ, ದರ ರೂ.2320/- ರಂತೆ ನಿಗದಿಪಡಿಸಲಾಗಿದೆ. ಜಿಲ್ಲೆಯ ರೈತರಿಂದ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೋಂದಣಿ ಕೇಂದ್ರಗಳನ್ನು ತೆರೆದು ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಭತ್ತವನ್ನು ಖರೀದಿಸಲು ಕರ್ನಾಟಕ ಆಹಾರ ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿರುತ್ತದೆ. ಈ ಖರೀದಿ ಏಜೆನ್ಸಿಯವರು ರೈತರಿಂದ ಭತ್ತವನ್ನು ನೊಂದಣಿ ಪ್ರಕ್ರಿಯೆಯನ್ನು ದಿನಾಂಕ15-11-2024 ರಿಂದ 31-12-2024 ರವರೆಗೆ ರೈತರ ನೊಂದಣಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. ರೈತರಿಂದ ಭತ್ತವನ್ನು ಖರೀದಿಸುವ ಪ್ರಕ್ರಿಯೆಯನ್ನು ದಿನಾಂಕ 01-01-2025 ರಿಂದ 31-03-2025ರ ಅವಧಿಯೊಳಗೆ ಭತ್ತ ಖರೀದಿ ಕಾರ್ಯಗಳನ್ನು ಕೈಗೊಳ್ಳಲಾಗುವುದು. KFCSC ಗೋದಾಮು, ಎ.ಪಿ.ಎಂ.ಸಿ. ಯಾರ್ಡ್ ಉಡುಪಿ, KFCSC ಗೋದಾಮು, ಕೋಟೇಶ್ವರ, ಕುಂದಾಪುರ, KFCSC ಗೋದಾಮು, ಎ.ಪಿ.ಎಂ.ಸಿ. ಯಾರ್ಡ್ ಕಾರ್ಕಳಗಳಲ್ಲಿ ನೊಂದಣಿ /ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದೆ.

ಉಡುಪಿ ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫೂಟ್ಸ್ ದತ್ತಾಂಶದಲ್ಲಿ ಸೇರ್ಪಡಿಸಿಕೊಂಡು ಮತ್ತು ಸೇರ್ಪಡಿಸಿಕೊಂಡಿರುವ ಬಗ್ಗೆ, ಫೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆಯೊಂದಿಗೆ ಆಧಾರ್ ಜೋಡಣೆಗೊಂಡಿರುವ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೊಂದಣಿ ಕೇಂದ್ರಕ್ಕೆ ಬಂದು ನೊಂದಣಿ ಮಾಡಿಸಿಕೊಳ್ಳುವಂತೆ ಹಾಗೂ ರೈತರು ಈ ಯೋಜನೆ ಸದುಪಯೋಗಪಡಿಸಿಕೊಳ್ಳುವಂತೆ  ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!