spot_img
Friday, April 3, 2026
spot_img

ನಕಲಿ ಪರಶುರಾಮ : ಶಿಲ್ಪಿ ಕೃಷ್ಣ ನಾಯ್ಕ್‌ ಜಾಮೀನು ಅರ್ಜಿ ವಜಾ

ಜನಪ್ರತಿನಿಧಿ (ಉಡುಪಿ) : ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಶಿಲ್ಪಿ ಕೃಷ್ಣ ನಾಯ್ಕ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಶೆಟ್ಟಿ ಅವರು ಕಾರ್ಕಳ ಟೌನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಿಸಿರುವ ಎಫ್ಐಆರ್‌ ಹಾಗೂ ಕಾರ್ಕಳ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಕೃಷ್ಣ ನಾಯಕ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಇತ್ತೀಚೆಗಷ್ಟೇ ಪ್ರಕಟಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್‌ ನ ಏಕಸದಸ್ಯ ನ್ಯಾಯಪೀಠ ಅರ್ಜಿಯನ್ನು ತಿರಸ್ಕರಿಸಿತ್ತು.
ಆರೋಪಿ ಕೃಷ್ಣ ನಾಯಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಸಮಿವುಲ್ಲಾ, ಆರೋಪಿ ಅರ್ಜಿಯನ್ನು ವಜಾ ಗೊಳಿಸಿ ಆದೇಶ ನೀಡಿದರು. ಸರಕಾರದ ಪರ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದ ಮಂಡಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!