spot_img
Sunday, February 15, 2026
spot_img

ಕೋವಿಡ್‌ ಮಹಾ ಹಗರಣ : ಮಾಜಿ ಸಿಎಂ ಬಿಎಸ್‌ವೈ, ಶ್ರೀರಾಮುಲುಗೆ ಸಂಕಷ್ಟ | ಪ್ರಾಸಿಕ್ಯೂಷನ್‌ಗೆ ಶಿಫಾರಸ್ಸು ಮಾಡಿದ ನ್ಯಾ. ಕುನ್ಹಾ !

ಜನಪ್ರತಿನಿಧಿ (ಬೆಂಗಳೂರು) : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದ್ದ ಕೋವಿಡ್ ಹಗರಣ ಈಗ ಮತ್ತೆ ಸದ್ದು ಮಾಡುತ್ತಿದೆ. 2020ರಲ್ಲಿ ಕೋವಿಡ್‌ ಸೋಂಕು ದೇಶವನ್ನು ವ್ಯಾಪಿಸಿಕೊಂಡು, ಮಾರಣಹೋಮ ನಡೆಸುತ್ತಿದ್ದಾಗಲೂ ಕರ್ನಾಟಕದಲ್ಲಿ ಅಂದಿನ ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ನಿರ್ವಹಣೆಯಲ್ಲೂ ಭ್ರಷ್ಟಾಚಾರ ನಡೆಸಿತ್ತು ಎನ್ನುವ ಆರೋಪವನ್ನು ಕಾಂಗ್ರೆಸ್ ಮಾಡಿತ್ತು.

ಕೋವಿಡ್ ನಿರ್ವಹಣೆಯಲ್ಲಿ ಬರೋಬ್ಬರಿ 40,000 ಕೋಟಿ ರೂ. ಹಗರಣ ನಡೆದಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಗಂಭೀರ ಆರೋಪ ಮಾಡಿದ್ದರು. ಕಾಂಗ್ರೆಸ್‌ ಪಾಲಿಗೆ ಇದು ದೊಡ್ಡ ರಾಜಕೀಯ ಗ್ರಾಸವಾಗಿತ್ತು. ಯತ್ನಾಳ್‌ ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲೆ ಹೊರಿಸಿದ ಗಂಭೀರ ಆರೋಪದ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಕೋವಿಡ್ ಹಗರಣದ ಬಗ್ಗೆ ತನಿಖೆಗಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿತ್ತು. ಈ ತನಿಖೆಯ ಮಧ್ಯಂತರ ವರದಿಯಿಂದ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಅಂದಿನ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಿದೆ.

ಪಿಪಿಇ ಕಿಟ್ ಖರೀದಿಯಲ್ಲಿ ಬೃಹತ್ ಭ್ರಷ್ಟಾಚಾರ!

ಕೋವಿಡ್ ವೈದ್ಯಕೀಯ ಕಿಟ್ ಖರೀದಿಯಲ್ಲಿಯೇ ಬೃಹತ್ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳು ಕೇಳಿಬಂದಿತ್ತು. 2021ರ ಜುಲೈ- ಆಗಸ್ಟ್‌ನಲ್ಲಿ ‘ಸಾರ್ವಜನಿಕ ಲೆಕ್ಕಪತ್ರ ಸಮಿತಿ’ ಬಿಡುಗಡೆ ಮಾಡಿದ ವರದಿಯಲ್ಲಿ ಕೋವಿಡ್ ಹಗರಣದ ಬಗ್ಗೆ ಗಂಭೀರ ಆರೋಪಗಳಿದ್ದವು. 2023ರ ಮೇನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರಗಳ ಬಗ್ಗೆ ತನಿಖೆ ನಡೆಸಲು ಸಮಿತಿ ರಚನೆ ಮಾಡಿತ್ತು. ಅಂತೆಯೇ, ಕೋವಿಡ್ ಹಗರಣದ ಬಗ್ಗೆ ತನಿಖೆಗಾಗಿ ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು.

ಬಿಎಸ್‌ವೈ, ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು
ಇದೀಗ ಕೋವಿಡ್ ಅಕ್ರಮಗಳ ಬಗ್ಗೆ ಜಸ್ಟಿಸ್ ಮೈಕೆಲ್ ಡಿ ಕುನ್ಹಾ ಅವರು ದಾಖಲೆ ಸಮೇತ ಸರ್ಕಾರಕ್ಕೆ ವರದಿ ನೀಡಿದ್ದಾರೆ.  ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮವೆಸಗಿದ ಅಂದಿನ ಸಿಎಂ ಯಡಿಯೂರಪ್ಪ ಮತ್ತು ಅಂದಿನ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ಶಿಫಾರಸು ಮಾಡಿದೆ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕ್ರಮಕ್ಕೂ ಶಿಫಾರಸು ಮಾಡಲಾಗಿದೆ

3 ಲಕ್ಷ ಪಿಪಿಇ ಕಿಟ್, 14 ಕೋಟಿ ಭ್ರಷ್ಟಾಚಾರ!
ಚೀನಾ ಜೊತೆ ವಹಿವಾಟು ನಿರ್ಬಂಧ ಸಂದರ್ಭದಲ್ಲೇ ದೇಶೀಯ ಸಂಸ್ಥೆಗಳು ಸರಬರಾಜು ಅವಕಾಶ ಇದ್ದರೂ ಹೆಚ್ಚು ಹಣ ನೀಡಿ ಚೀನಾದಿಂದ ಪಿಪಿಇ ಕಿಟ್ ಖರೀದಿ ಮಾಡಲಾಗಿತ್ತು. 3 ಲಕ್ಷ ಪಿಪಿಇ ಕಿಟ್ ಖರೀದಿಯಲ್ಲಿ 14 ಕೋಟಿ ಭ್ರಷ್ಟಾಚಾರ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ದೇಶಿ ಕಂಪನಿಗಳಿಗಿಂತ ಮೂರು ಪಟ್ಟು ಹೆಚ್ಚಳ ದರ ನೀಡಿ ಖರೀದಿ ಮಾಡಲಾಗಿತ್ತು. ಸರಬರಾಜಿನಲ್ಲೂ ಕಡಿಮೆ ಮಾಡಿ, ಹಣ ಪಾವತಿ ಮಾಡಿದ ಮೇಲೆಯೂ ಮರು ಪರಿಷ್ಕರಣೆ ಮಾಡಿ ಮತ್ತೆ ಖರೀದಿ ಮಾಡಿರುವ ಆರೋಪವನ್ನು ಅಂದಿನ ರಾಜ್ಯ ಸರ್ಕಾರ ಎದುರಿಸಿತ್ತು.

ಇನ್ನು, ಈ ಹಿಂದೆ ಮಧ್ಯಂತರ ವರದಿ ಬಂದಾಗ, ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಸಚಿವರಾಗಿದ್ದ ಹಾಲಿ ಸಂಸದ ಡಾ. ಕೆ. ಸುಧಾಕರ್ ಅವರು, “ನಾನು ಕೋವಿಡ್ ಕಾಲದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಆಗಿದ್ದೆ. ಆ ವೇಳೆ ನಾನು ಅಂತಃಕರಣದಿಂದ ಕೆಲಸ ಮಾಡಿದ್ದೇನೆ. ನನ್ನ ಪ್ರಾಣ ಒತ್ತೆ ಇಟ್ಟು ಊಟ ತಿಂಡಿ ಮರೆತು ಹಗಲಿರುಳು ರೋಗಿಗಳ ಸೇವೆ ಮಾಡಿದ್ದೇನೆ. ನಾನು ಯಾವುದೇ ಕಾನೂನು ಬಾಹಿರ ಕೆಲಸ ಮಾಡಿಲ್ಲ’ ಎಂದು ಸಂಪೂರ್ಣ ವರದಿ ಬರುವ ಮುನ್ನವೇ ತಮ್ಮನ್ನು ತಾವೇ ಸಮರ್ಥಿಸಿಕೊಳ್ಳಲು ಮುಂದಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!