spot_img
Sunday, February 15, 2026
spot_img

ವಯನಾಡು ಉಪ ಚುನಾವಣೆ : ಸಿಎಂ, ಡಿಸಿಎಂ ಭಾವಚಿತ್ರಗಳಿರುವ ಆಹಾರದ ಕಿಟ್‌ ವಶ | ಕರುನಾಡಿಗೆ ಮಾರಿ – ವಯನಾಡಿಗೆ ಉಪಕಾರಿ : ಬಿಜೆಪಿ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : “ಕರುನಾಡಿಗೆ ಮಾರಿ – ವಯನಾಡಿಗೆ ಉಪಕಾರಿ”- ಇದೇ ರಾಜ್ಯ ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯ ಬಿಜೆಪಿ ತೀವ್ರ ಟೀಕಾ ಪ್ರಹಾರ ಮಾಡಿದೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್  ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ  ಅವರ ಭಾವಚಿತ್ರಗಳನ್ನು ಹೊಂದಿದ್ದ ಹಾಗೂ ಹಂಚಿಕೆಗೆ ಸಿದ್ಧವಾಗಿದ್ದ ಆಹಾರ ಕಿಟ್‌ಗಳನ್ನು ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸರು ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ವಶಪಡಿಸಿಕೊಂಡಿರುವ ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಟುವಾಗಿ ಟೀಕಿಸಿದೆ.

ಕನ್ನಡಿಗರು ಪಡಿತರ ಸಿಗದೆ ದಿನಗಟ್ಟಲೆ ಸರತಿ ಸಾಲಿನಲ್ಲಿ ಕಾಯುತ್ತಿದ್ದರೆ, ಅತ್ತ ನಾಡದ್ರೋಹಿ ಕಾಂಗ್ರೆಸ್‌ ಸರ್ಕಾರ ಕನ್ನಡಿಗರ ಪಾಲಿನ ಪಡಿತರವನ್ನು ವಯನಾಡಿನ ಜನತೆಗೆ ಪ್ರಿಯಾಂಕಾ ಗಾಂಧಿಯವರ ಹೆಸರಿನಲ್ಲಿ ನೀಡುತ್ತಿದೆ ಎಂದು ಹೇಳಿದೆ.

ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಡಿ. ಕೆ ಶಿವಕುಮಾರ್ ಅವರೆ, ನಿಮ್ಮ ನಾಡದ್ರೋಹಕ್ಕೆ ಕನ್ನಡಿಗರು ತಕ್ಕ ಪಾಠ ಕಲಿಸುವುದು ಖಚಿತ-ನಿಶ್ಚಿತ-ಖಂಡಿತ. ತೆಲಂಗಾಣ ಚುನಾವಣೆ ಬಳಿಕ ವಯನಾಡು ಚುನಾವಣೆಗೂ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದ ತೆರಿಗೆದಾರರ ದುಡ್ಡು ಬಳಸುತ್ತಿರುವ ಅನುಮಾನ ಸೃಷ್ಟಿಯಾಗಿದೆ. ಕೇರಳ ರಾಜ್ಯದ ವಯನಾಡಿನ ಲೋಕಸಭಾ ಉಪ ಚುನಾವಣೆಗೆ ನಕಲಿ ಗಾಂಧಿಗಳ ಕುಡಿ ಸ್ಪರ್ಧಿಸುತ್ತಿದ್ದು, ಅವರನ್ನು ಮೆಚ್ಚಿಸಲು ರಾಜ್ಯ ಕಾಂಗ್ರೆಸ್‌ ಸರ್ಕಾರ ಭಾರೀ ಕಸರತ್ತು ನಡೆಸುತ್ತಿದೆ ಎಂದು ಆಕ್ರೋಶ ಹೊರಹಾಕಿದೆ.

ಕಾಂಗ್ರೆಸ್ ಹೊರ ರಾಜ್ಯಗಳ ಚುನಾವಣೆಗೆ ಫಂಡಿಂಗ್ ಮಾಡಲು ರಾಜ್ಯವನ್ನು ಲೂಟಿ ಹೊಡೆಯುತ್ತಿರುವ ರೀತಿ ಇದಾಗಿದೆ. ರಾಜ್ಯದ ಬಿಪಿಎಲ್ ಕಾರ್ಡುದಾರರ ಕಾರ್ಡ್‌ಗಳನ್ನು ಒಂದೆಡೆ ರದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಹೈಕಮಾಂಡ್ ಮೆಚ್ಚಿಸಲು ವಯನಾಡಿಗೆ ಆಹಾರ ಕಿಟ್‌ಗಳನ್ನು ವಿತರಿಸುತ್ತಿದೆ ಎಂದು ಹೇಳಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!