spot_img
Sunday, February 15, 2026
spot_img

ಉಳಿದ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ ಪುನರುಚ್ಛಾರ | ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿ.

ಜನಪ್ರತಿನಿಧಿ (ಬೆಂಗಳೂರು/ಸಂಡೂರು) : ಇನ್ನು ಉಳಿದ ಮೂರೂವರೆ ವರ್ಷ ನಾನೇ ಮುಖ್ಯಮಂತ್ರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಛರಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಸರ್ಕಾರದ ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ನಡುವಲ್ಲೇ ಸಿದ್ದರಾಮಯ್ಯ ಅವರ ಈ ಹೇಳಿಕೆ ಕಾಂಗ್ರೆಸ್‌ ಹಾಗೂ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.

ಸಂಡೂರಿನಲ್ಲಿ ಉಪ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ಮೂರೂವರೆ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಸಿದ್ದರಾಮಯ್ಯ ಇರುವವರೆಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ ನನ್ನನ್ನು ಮುಗಿಸಲು ಸಿಬಿಐ, ಇಡಿ, ಐಡಿಯನ್ನು ಬಳಸಿಕೊಂಡು ಷಡ್ಯಂತ್ರ ಮಾಡುತ್ತಿದ್ದಾರೆಂದು ಅವರು ಹೇಳಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಬಾರಿ ದೊಡ್ಡ ಚರ್ಚೆಗೆ ಕಾರಣವಾಗಿರುವ ಕಾಂಗ್ರೆಸ್‌ ಸರ್ಕಾರದ  ನಾಯಕತ್ವ ಬದಲಾವಣೆ ವಿಚಾರವನ್ನು ಸಿದ್ದರಾಮಯ್ಯ ಅವರು ಮತ್ತೊಮ್ಮೆ ಪ್ರಸ್ತಾಪಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಇನ್ನು ಕೆಲವು ದಿನಗಳು ಇರುವಾಗಲೇ, ಉಪಚುನಾವಣೆ ನಡೆಯಲಿದ್ದು, ಚುನಾವಣೆಯಲ್ಲಿ ಅಹಿಂದ ಮತದಾರರನ್ನು ಅದರಲ್ಲೂ ಕುರುಬ ಮತಗಳನ್ನು ಧ್ರುವೀಕರಿಸುವ ಕಾರ್ಯತಂತ್ರದ ಭಾಗವಾಗಿ ಹಾಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಈ ರೀತಿಯ ಹೇಳಿಕೆ ನೀಡಿರಬಹುದು ಎಂದು ಹೇಳಲಾಗುತ್ತಿದೆ.

ಉಪ ಚುನಾವಣೆಯ 3 ವಿಧಾನ ಸಭಾ ಕ್ಷೇತ್ರಗಳ ಪೈಕಿ ಸಿದ್ದರಾಮಯ್ಯ ಅವರ ಪ್ರಭಾವವಿರುವ ಹಾಗೂ ಅಹಿಂದ ಪ್ರಾಬಲ್ಯವಿರುವ ಕ್ಷೇತ್ರವಾಗಿರುವ ಸಂಡೂರಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದರಂತೆ ಯಾಸಿರ್ ಅಹಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಅವರಿಗೆ ಸಲಹೆ ನೀಡಿದ್ದರು. ಇನ್ನು ಚನ್ನಪಟ್ಟಣದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೈಕಮಾಂಡ್’ಗೆ ಸಲಹೆ ನೀಡಿ ಯೋಗೇಶ್ವರ್ ಅವರಿಗೆ ಟಿಕೆಟ್ ದೊರೆಯುವಂತೆ ಮಾಡಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ಮುಡಾ ಹಗರಣದ ಆರೋಪಿಯಾಗಿದ್ದು, ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಕಾಂಗ್ರೆಸ್ ಶಾಸಕರಲ್ಲಿ ವಿಶ್ವಾಸ ಮೂಡಿಸಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಅವರು ಯಾವಾಗ ರಾಜೀನಾಮೆ ನೀಡುತ್ತಾರೆಂಬುದು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಿಳಿದಿದೆ. ಶೀಘ್ರದಲ್ಲೇ ಆ ಸಮಯ ಬರಲಿದ್ದು, ಕೆಲವು ಸಮುದಾಯಗಳ ಮತಗಳ ಸೆಳೆಯಲು ಸಿಎಂ ಆಗಿ ಮುಂದುವರಿಯುವುದಾಗಿ ಹೇಳಿಕೊಂಡಿದ್ದಾರೆಂದು ಹೇಳಿದ್ದಾರೆ.

ಶಿಗ್ಗಾಂವಿಯಲ್ಲಿ ಈ ಬಾರಿ ಬಿಜೆಪಿ ಜಯಭೇರಿ ಬಾರಿಸಲಿದೆ. ಚನ್ನಪಟ್ಟಣ, ಸಂಡೂರಿನಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಆ ಸ್ಥಾನವೂ ಕೈ ತಪ್ಪುತ್ತಿದೆ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ಇತರೆ ಕೆಲಸಗಳನ್ನು ಬದಿಗಿಟ್ಟು ಸಂಡೂರಿನಲ್ಲಿ ಬೀಡು ಬಿಟ್ಟಿದ್ದಾರೆಂದು ತಿಳಿಸಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹೆಚ್’ಡಿ.ದೇವೇಗೌಡ ಅವರು ಮಾತನಾಡಿ, ಸಿದ್ದರಾಮಯ್ಯ ಅವರು ದೊಡ್ಡ ವ್ಯಕ್ತಿ. ಪ್ರಸ್ತುತ ಸಿಎಂ ಆಗಿದ್ದರೂ, ಮುಖ್ಯಮಂತ್ರಿಯಾಗಿ ನಾನೇ ಮುಂದುವರೆಯುತ್ತೇನೆಂದು ಹೇಳುತ್ತಿದ್ದಾರೆಂದು ವ್ಯಂಗ್ಯವಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!