spot_img
Sunday, March 22, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಖೇಲೋ ಜನತಾ 2K24

 

ಹೆಮ್ಮಾಡಿ:(ಜನಪ್ರತಿನಿಧಿ ವಾರ್ತೆ) ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಖೇಲೋ ಜನತಾ 2024 ಸಂಭ್ರಮದಿಂದ ನೆರವೇರಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರದ ದೈಹಿಕ ಶಿಕ್ಷಣ ಶಿಕ್ಷಕರಾದ ಉದಯರವರು ಮಾತನಾಡಿ ಜನತಾ ಶಿಕ್ಷಣ ಸಂಸ್ಥೆ ಕ್ರೀಡಾ ರಂಗಕ್ಕೆ ಕೊಡುತ್ತಿರುವ ಪ್ರೋತ್ಸಾಹ ಅದ್ಭುತವಾಗಿದೆ. ವಿದ್ಯಾರ್ಥಿಗಳೇ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧಕರಾಗಬೇಕಾದರೆ ಕಾಲೇಜಿನ ಕ್ರೀಡಾಕೂಟಗಳು ಅಡಿಪಾಯವಾಗಿದೆ. ಧೈರ್ಯವಾಗಿ ಆಡಿ ಎಂದು ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ವಾರ್ಷಿಕ ಕ್ರೀಡಾಕೂಟ ಮಹತ್ವಪೂರ್ಣವಾಗಿದೆ ಆ ಮೂಲಕ ಸಾವಿರಾರು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳನ್ನು ಅನಾವವರಣಗೊಳಿಸಿ ಪ್ರೋತ್ಸಾಹ ನೀಡಲಾಗುತ್ತಿದೆ.ಸೋಲೇ ಗೆಲುವಿನ ಸೋಪಾನ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕರಾದ ಮಂಜು ಕಾಳಾವರ,ಕಾಲೇಜಿನ ಉಪ-ಪ್ರಾಂಶುಪಾಲರಾದ ಶ್ರೀ ರಮೇಶ ಪೂಜಾರಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ಕು| ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ಸಾಮೂಹಿಕ ಪಥ ಸಂಚಲನ ನೆರವೇರಿತು ಮುಖ್ಯ ಅತಿಥಿಗಳು ಗೌರವ ರಕ್ಷೆಯನ್ನು ಸ್ವೀಕರಿಸಿದರು.ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಕಾಲೇಜಿನ ವಿದ್ಯಾರ್ಥಿಗಳ, ಬೋಧಕ/ಬೋಧಕೇತರ ವ್ರಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ,ಉಪನ್ಯಾಸಕರಾದ ಉಮೇಶ ನಾಯ್ಕರವರು ಸ್ವಾಗತಿಸಿ, ಉಪನ್ಯಾಸಕ ಉದಯ ನಾಯ್ಕ ಕಾರ್ಯಕ್ರಮ ನಿರ್ವಹಿಸಿ,ಉಪನ್ಯಾಸಕಿ ಶ್ರೀಮತಿ ರಂಜಿತಾ ಹೆಗ್ಡೆ ವಂದಿಸಿದರು.

 

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!