spot_img
Monday, May 18, 2026
spot_img

ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ !? | ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದೇನು ?

ಜನಪ್ರತಿನಿಧಿ  (ಹುಬ್ಬಳ್ಳಿ) : ರಾಜ್ಯದಲ್ಲಿ ನಡೆಯುತ್ತಿರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ʻಟೋಕನ್ʼ ಮೊರೆ ಹೋಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಜೋಶಿ, ಈ ಬಾರಿ ಉಪ ಚುನಾವಣೆಯಲ್ಲಿ ಶತಾಯ ಗತಾಯ ಗೆಲ್ಲಬೇಕೆಂಬ ಭರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಟೋಕನ್ ಮೂಲಕ ಹಣ ಹಂಚಿಕೆ ಶುರು ಮಾಡಿದೆ. ಟೋಕನ್ ತೋರಿಸಿದವರಿಗೆ ಹಣ ಕೊಟ್ಟು ಕಳಿಸುವ ವ್ಯವಸ್ಥೆ ಮಾಡಿದೆ ಎಂಬುದು ಮಾದ್ಯಮಗಳಲ್ಲಿ ವರದಿಯಾಗಿದೆ. ಕಾಂಗ್ರೆಸ್ ಲೂಟಿ ಮಾಡಿದ್ದನ್ನು ಹೀಗೆ ಹಂಚುತ್ತಿದೆ ಎಂದು ಅವರು ದೂರಿದ್ಧಾರೆ.

ರಾಜ್ಯದಲ್ಲಿ ನಡೆಯುತ್ತಿರುವ ಮೂರೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅದೆಷ್ಟೇ ಟೋಕನ್, ಹಣ ಹಂಚಿದರೂ ಗೆಲ್ಲೋದು ನಾವೇ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಪರ ಒಲವಿದೆ. ಪ್ರಚಾರದ ಸಂದರ್ಭದಲ್ಲಿ ಜನರಿಂದ ಉತ್ತಮ ಸ್ಪಂದನೆ ದೊರಕಿದೆ. ಹಾಗಾಗಿ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಲಿದೆ. ಸಂಡೂರು, ಶಿಗ್ಗಾವಿಯಲ್ಲಿ ಬಿಜೆಪಿ ಮತ್ತು ಚನ್ನಪಟ್ಟಣದಲ್ಲಿ ಜೆಡಿಎಸ್ ಗೆಲುವು ನಿಶ್ಚಿತ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು, ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿರುವ ವಕ್ಪ್‌ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಜೋಶಿ, ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಕೇಂದ್ರ ಬಸ್ ನಿಲ್ದಾಣ ಸಹ ವಕ್ಫ್ ಆಸ್ತಿ ಎಂಬುದಾಗಿ ವಕ್ಫ್ ಮಂಡಳಿ ಹೇಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಜಮೀನು ವಕ್ಫ್ ಆಸ್ತಿ ಆಯಿತೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎನ್ನಲಾದ ರೈತ ರುದ್ರಪ್ಪ ಅವರ ಹಾನಗಲ್ ತಾಲ್ಲೂಕಿನ ಹರನಗಿರಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ‘ವಕ್ಫ್ ಮೂಲಕ ರಾಜ್ಯ ಸರ್ಕಾರ, 9 ಲಕ್ಷ ಎಕರೆ ಜಮೀನು ಕಬಳಿಸಲು ಹೊರಟಿದೆ’ ಎಂದು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್ 175 ಎಕರೆ ಇದೆ. ಇದು ಸಹ ವಕ್ಫ್ ಆಸ್ತಿಯೆಂದು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಆಡಳಿತದಲ್ಲಿ ನಾಳೆ ವಿಧಾನಸೌಧವೂ ವಕ್ಫ್ ಆಸ್ತಿಯಾದರೂ ಆಶ್ಚರ್ಯವಿಲ್ಲ’ ಎಂದು ಅವರು ವ್ಯಂಗ್ಯವಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!