spot_img
Wednesday, April 1, 2026
spot_img

ಜನಾರ್ಧನ ರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ | ಬಳ್ಳಾರಿ ಮಹಾಜನತೆಯನ್ನು ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ : ಗಣಿದಣಿಗೆ ಸಿಎಂ ತಿರುಗೇಟು

ಜನಪ್ರತಿನಿಧಿ (ಬಳ್ಳಾರಿ/ಬೆಂಗಳೂರು) : ಜನಾರ್ಧನ ರೆಡ್ಡಿ ಒಬ್ಬ ಜುಜುಬಿ ರಾಜಕಾರಣಿ. ನೀವು ಎಷ್ಟು ವರ್ಷ ಜೈಲಿಗೆ ಹೋಗಿ ಬಂದಿದೀರಿ ಎಂದು ಜಗತ್ತು ನೋಡಿದೆ. ನಿಮ್ಮ ಅಟ್ಟಹಾಸ ಮುರಿದದ್ದು, ಬಳ್ಳಾರಿ ಜಿಲ್ಲೆಯ ಮಹಾಜನತೆಯನ್ನು ಭಯಮುಕ್ತಗೊಳಿಸಿದ್ದು ಇದೇ ಸಿದ್ದರಾಮಯ್ಯ ಎನ್ನುವುದನ್ನು ಮರೀಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ವಿಠಲಾಪುರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೆಡ್ಡಿಯವರೇ, ಕರ್ನಾಟಕ ರಾಜ್ಯ ರಾಜಕಾರಣಕ್ಕೆ ನನ್ನ ಕೊಡುಗೆ ಏನು? ಬಳ್ಳಾರಿಗೆ ನಿಮ್ಮ ಕೊಡುಗೆ ಏನು? ನೀವೇನು ಬಳ್ಳಾರಿ ಯಜಮಾನರಾ? ಮತ ಹಾಕುವ ಬಳ್ಳಾರಿಯ ಜನ, ಸಂಡೂರಿನ ಜನ ನಮ್ಮ ಯಜಮಾನರು. ನೆನಪಿರಲಿ. ನಾನು ಗಂಗಾವತಿಗೆ ಪ್ರಚಾರಕ್ಕೆ ಹೋಗಲು ಆಗಲಿಲ್ಲ, ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸರಿಯಾದ ಪ್ರಚಾರ ಮಾಡಲಿಲ್ಲ ಹೀಗಾಗಿ ನೀವು ಗೆದ್ದಿದ್ದು. ನಿಮ್ಮ ಈ ಗೆಲುವು ಶಾಶ್ವತ ಅಲ್ಲ. ಯಾರ ಗೆಲುವೂ ಶಾಶ್ವತ ಅಲ್ಲ. ನೆನಪಿರಲಿ. ನನ್ನ ಬಗ್ಗೆ ಏಕ ವಚನದಲ್ಲಿ ಮಾತನಾಡುವ ಯೋಗ್ಯತೆ ನಿಮಗಿಲ್ಲ ಎಂದು ಅವರು ಹೇಳಿದ್ದಾರೆ.

ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ಇರಬಾರದಾ? ನಮ್ಮ ಸರ್ಕಾರ ಇದೆ. ಯಡಿಯೂರಪ್ಪ ಅವರು, ನೀವು ಮಾತನಾಡುತ್ತಿಲ್ಲವಾ? ನಿಮ್ಮ ಸರ್ಕಾರ ಇದ್ದಾಗ ನನಗೆ ಬಳ್ಳಾರಿಯಲ್ಲಿ ಮಾತನಾಡಲು ಜಾಗ ಕೊಟ್ಟಿರಲಿಲ್ಲ. ನನಗೆ ಕುಡಿಯೋದಕ್ಕೆ ನೀರು ಕೇಳಿದ್ರೂ ಜನ ನೀರು ಕೊಡುವುದಕ್ಕೂ ಭಯ ಪಡ್ತಾ ಇದ್ರು. ನಮ್ಮ ಯಜಮಾನರಾದ ಬಳ್ಳಾರಿ ಜನರನ್ನು ಇಷ್ಟು ಭಯದಲ್ಲಿ ಇಟ್ಟಿದ್ರಲ್ಲಾ ಈಗ ಯಾವ ಮುಖ ಹೊತ್ತುಕೊಂಡು ಇದೇ ಜನರ ಬಳಿ ಮತ ಕೇಳಲು ಬಂದಿದ್ದೀರಿ? ನಾಚಿಕೆ ಆಗುವುದಿಲ್ವಾ ನಿಮಗೆ? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಕೆಲವು ದಿನಗಳ ಹಿಂದೆ ಜನಾರ್ಧನ್‌ ರೆಡ್ಡಿ, ಬಿಜೆಪಿ ಪ್ರಚಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದರು. ಸಿದ್ದರಾಮಯ್ಯ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದರು. ಈಗ ನಾನು ಮತ್ತೆ ವಿಧಾನಸಭೆಯನ್ನು ಪ್ರವೇಶಿಸಿದ್ದೇನೆ. ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಜೈಲಿಗೆ ಹೋಗುವ ಕಾಲ ಹತ್ತಿರಲ್ಲಿದೆ ಎಂದು ಅವರು ಹೇಳಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!