spot_img
Wednesday, April 1, 2026
spot_img

ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸಿ ಸಂವಿಧಾನವನ್ನು ಅವಮಾನಿಸಿದ್ದಾರೆ : ಶಾ ವಾಗ್ದಾಳಿ

ಜನಪ್ರತಿನಿಧಿ (ಜಾರ್ಖಂಡ್) : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಸಂವಿಧಾನವನ್ನು ಅವಮಾನಿಸಿದ್ದಾರೆ ಮತ್ತು ಅಪಹಾಸ್ಯ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಹುಲ್‌ ಗಾಂಧಿ ವಿರುದ್ಧ ಇಂದು (ಶನಿವಾರ) ಆರೋಪಿಸಿದ್ದಾರೆ.

ಜಾರ್ಖಂಡ್ ನ ಪಲಮುನಲ್ಲಿ ಬಿಜೆಪಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ಬಿಜೆಪಿ ಎಂದಿಗೂ ಕಾಂಗ್ರೆಸ್‌ಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

“ರಾಹುಲ್ ಗಾಂಧಿಯವರು ಸಂವಿಧಾನದ ಪ್ರತಿಯನ್ನು ತೋರಿಸುತ್ತಾರೆ. ಅವರು ತೋರಿಸಿದ ಸಂವಿಧಾನದ ಪ್ರತಿ ನಕಲಿ ಎಂಬುದು ಎರಡು ದಿನಗಳ ಹಿಂದೆ ಬಹಿರಂಗವಾಗಿದೆ. ಯಾವುದೇ ವಿಷಯವಿಲ್ಲದ ಆ ಪ್ರತಿಯ ಮುಖಪುಟದಲ್ಲಿ ಭಾರತದ ಸಂವಿಧಾನ ಎಂದು ಬರೆಯಲಾಗಿದೆ. ಸಂವಿಧಾನವನ್ನು ಅಪಹಾಸ್ಯ ಮಾಡಬೇಡಿ, ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ನೀವು ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದೀರಿ ಮತ್ತು ಸಂವಿಧಾನವನ್ನು ಅಪಹಾಸ್ಯ ಮಾಡಿದ್ದೀರಿ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದರು.

ಒಬಿಸಿ, ಬುಡಕಟ್ಟು ಮತ್ತು ದಲಿತರಿಂದ ಮೀಸಲಾತಿಯನ್ನು ಕಿತ್ತುಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ ಮತ್ತು ಆ ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲು ಯೋಜಿಸಿದೆ ಎಂದು ಶಾ ಆರೋಪಿಸಿದರು.

“ಕಾಂಗ್ರೆಸ್ ಒಬಿಸಿ ಕೋಟಾದ ವಿರುದ್ಧವಾಗಿದೆ. ಉಲೇಮಾಗಳ ನಿಯೋಗವು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿಯಾದಾಗ ಅಲ್ಪಸಂಖ್ಯಾತರಿಗೆ ಶೇ. 10 ರಷ್ಟು ಮೀಸಲಾತಿ ನೀಡುವ ಭರವಸೆ ನೀಡಿದೆ. ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ, ಬಿಜೆಪಿ ಯಾವತ್ತೂ ಧರ್ಮ ಆಧಾರಿತ ಮೀಸಲಾತಿ ಅವಕಾಶ ನೀಡುವುದಿಲ್ಲ” ಎಂದು ಅಮಿತ್ ಶಾ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!