spot_img
Wednesday, January 22, 2025
spot_img

ನಕಲಿ ಪರಶುರಾಮ : ಕೇರಳದ ಕ್ಯಾಲಿಕಟ್ ನಲ್ಲಿ ಶಿಲ್ಪಿ ಕೃಷ್ಣ ನಾಯ್ಕ್ ಬಂಧನ !

ಜನಪ್ರತಿನಿಧಿ (ಉಡುಪಿ): ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿರುವ ಶಿಲ್ಪಿ, ಕೃಷ್ ಆರ್ಟ್‌ ವರ್ಲ್ಡ್‌ನ ಕೃಷ್ಣ ನಾಯ್ಕನನ್ನು ಕಾರ್ಕಳ ನಗರ ಪೊಲೀಸರು (ನ. 10ರಂದು) ಕೇರಳದ ಕ್ಯಾಲಿಕಟ್‌ನಲ್ಲಿ ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್‌ ಬೆಟ್ಟದ ಮೇಲೆ ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಶಿಲ್ಪಿ ಕೃಷ್ಣ ನಾಯ್ಕ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿತ್ತು.
ಕೃಷ್ಣ ನಾಯ್ಕ್ ಜಾಮೀನು ಅರ್ಜಿ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಪೊಲೀಸರು ಕೃಷ್ಣ ನಾಯ್ಕ್ ಬಂಧನಕ್ಕಾಗಿ ಪತ್ತೆ ಕಾರ್ಯ ಮಾಡಿದ್ದರು. ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯ್ಕ್ ಅವರನ್ನು ಕೊನೆಗೂ ಇಂದು (ಆದಿತ್ಯವಾರ) ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಆರೋಪಿ ಕೃಷ್ಣ ನಾಯ್ಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂ. ಹಣ ಪಡೆದುಕೊಂಡು ಕಾಮಗಾರಿ ನಡೆ ಸಿದ್ದು, ನಂತರ ಆರೋಪಿ ಕಂಚಿನ ಮೂರ್ತಿಯನ್ನು ಮಾಡದೇ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿರುವುದಾಗಿ ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿಯು ನಿರೀಕ್ಷಣಾ ಜಾಮೀನು ಕೋರಿ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಸಮಿವುಲ್ಲಾ, ಆರೋಪಿ ಅರ್ಜಿಯನ್ನು ವಜಾ ಗೊಳಿಸಿ ಆದೇಶ ನೀಡಿದರು. ಸರಕಾರದ ಪರ ಜಿಲ್ಲಾ ಸರಕಾರಿ ಅಭಿಯೋಜಕ ಪ್ರಕಾಶ್ಚಂದ್ರ ಶೆಟ್ಟಿ ಬೇಳೂರು ವಾದ ಮಂಡಿಸಿದ್ದರು.

ಶಾಸಕ ಸುನೀಲ್ ಕುಮಾರ್ ಅವರೊಂದಿಗೆ ಉನ್ನತ ಮಟ್ಟದ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಅವರಿಗೂ ಶಿಕ್ಷೆಯಾಗಲಿ :
ಗೊತ್ತಿದ್ದೂ ಕೂಡ ಕಳಪೆ ವಸ್ತುಗಳನ್ನು ಬಳಸಿ ಮೂರ್ತಿ ತಯಾರಿಸಿ ಸ್ಥಾಪನೆ ಮಾಡಿದ್ದಲ್ಲದೆ ಜನರ ಭಾವನೆಗಳ ಜೊತೆ, ಜನರ ಜೀವದ ಜೊತೆ ಚೆಲ್ಲಾಟವಾಡಿರಿವ ಕೃಷ್ಣ ನಾಯ್ಕ್ ಬಂಧನವಾಗಿರುದುವು  ಸತ್ಯಕ್ಕೆ ಸಂದ ಜಯ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಮತ್ತು ಮುಖ್ಯವಾಗಿ ಕಾರ್ಕಳ ಪೊಲೀಸ್ ಅಧಿಕಾರಿಗಳ ಕಾರ್ಯವೈಖರಿ ಶ್ಲಾಘನೀಯ.

ಈಗಾಗಲೇ ನಾವು ಮಾಹಿತಿ ಹಕ್ಕಿನ ಮೂಲಕ ಪಡೆದಿರುವ ದಾಖಲೆಗಳು, ನಮ್ಮ ಸಮಾನ ಮನಸ್ಕರ ತಂಡ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹದ ವಿಡಿಯೋ ಮತ್ತು ಇನ್ನಿತರೇ ಪೂರಕ ದಾಖಲೆಗಳು, ಪತ್ರಿಕೆಗಳಲ್ಲಿ  ಪ್ರಕಟಗೊಂಡ ತನಿಖಾ ವರದಿಗಳನ್ನು ಪೊಲೀಸ್ ಅಧಿಕಾರಿಗಳಿಗೆ ಸಾಕ್ಷಿಯಾಗಿ ನೀಡಿದ್ದೇವೆ. ಈ ಎಲ್ಲ ದಾಖಲೆಗಳನ್ನು ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಹಾಜರು ಪಡಿಸುತ್ತೇವೆ. ಎಲ್ಲಾ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೆ ನಮ್ಮ ಹೋರಾಟ ನಿಲ್ಲಿಸುವುದಿಲ್ಲ. ಶಾಸಕ ಸುನೀಲ್ ಕುಮಾರ್ ಅವರೊಂದಿಗೆ ಉನ್ನತ ಮಟ್ಟದ ಅಧಿಕಾರಿಗಳೂ ಶಾಮೀಲಾಗಿದ್ದಾರೆ. ಅವರಿಗೂ ಶಿಕ್ಷೆಯಾಗಬೇಕು.
-ದಿವ್ಯ ನಾಯಕ್
ಹೋರಾಟಗಾರರು, ಸಮಾನ ಮನಸ್ಕರ ತಂಡ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!