spot_img
Wednesday, April 1, 2026
spot_img

ಸುಪ್ರೀಂ ಕೋರ್ಟ್‌ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಪ್ರಮಾಣ ವಚನ

ಜನಪ್ರತಿನಿಧಿ (ನವ ದೆಹಲಿ) : ಸುಪ್ರೀಂ ಕೋರ್ಟ್‌ನ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಇಂದು (ಸೋಮವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ನ್ಯಾಯಮೂರ್ತಿ ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ನಿರ್ಗಮಿತ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಂದ ತೆರವಾದ ಸ್ಥಾನಕ್ಕೆ ಈಗ ಸಂಜೀವ್ ಖನ್ನಾ ಸಿಜೆಐ ಆಗಿ ಕಾರ್ಯ ನಿರ್ವಹಿಸುತ್ತಿದ್ದು, 2025ರ ಮೇ 13ರವರೆಗೆ ಅವರು ಸಿಜೆಐ ಆಗಿ ಅಧಿಕಾರದಲ್ಲಿ ಇರಲಿದ್ದಾರೆ.

ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಪಡಿಸಿದ ತೀರ್ಪು, ಸಂವಿಧಾನದ 370ನೆಯ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆದ ಕ್ರಮವನ್ನು ಎತ್ತಿಹಿಡಿದ ತೀರ್ಪು ಸೇರಿದಂತೆ ಸುಪ್ರೀಂ ಕೋರ್ಟ್ ನೀಡಿದ ಹಲವು ಮಹತ್ವದ ತೀರ್ಪುಗಳಲ್ಲಿ ಖನ್ನಾ ಅವರ ಪಾಲು ಕೂಡ ಇದೆ.

ನ್ಯಾ. ಖನ್ನಾ ಅವರ ತಂದೆ ದೇವರಾಜ್ ಖನ್ನಾ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿದ್ದರು. ಅಲ್ಲದೆ ನ್ಯಾ. ಖನ್ನಾ ಅವರ ಚಿಕ್ಕಪ್ಪ ಎಚ್. ಆರ್. ಖನ್ನಾ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!