spot_img
Thursday, April 2, 2026
spot_img

ಮೂರು ಕ್ಷೇತ್ರಗಳ ಉಪ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳ ಉಪಚುನಾಣೆಯ ಬಹಿರಂಗ ಪ್ರಚಾರ ಇಂದು (ಸೋಮವಾರ) ಸಂಜೆ 6 ಗಂಟೆಗೆ ಕೊನೆಯಾಗಲಿದೆ. ಬಹಿರಂಗ ಪ್ರಚಾರ ಕೊನೆಗೊಂಡ ಬಳಿಕ ಮನೆ ಮನೆಗೆ ತೆರಳಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಅವಕಾಶವಿದೆ.

ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ನಿರತರಾಗಿದ್ದಾರೆ. ಶಿಗ್ಗಾಂವಿಯಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ ಖಾನ್ ಪಠಾಣ್ ಪರ ಪ್ರಚಾರ ಸಭೆ ನಡೆಸಲಿದ್ದಾರೆ.

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದ ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಇಂದು ವಿವಿಧೆಡೆ ಪ್ರಚಾರ ನಡೆಸಲಿದ್ದಾರೆ.

ಈ ನಡುವೆ, ಸಂಡೂರು ಹಾಗೂ ಚನ್ನಪಟ್ಟಣದಲ್ಲೂ ಅಭ್ಯರ್ಥಿಗಳು ಹಾಗೂ ರಾಜಕೀಯ ನಾಯಕರು ಮತಯಾಚಿಸುತ್ತಿದ್ದಾರೆ.ಮೂರೂ ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶ ಹಮ್ಮಿಕೊಂಡು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತದಾರರಲ್ಲದವರು ಇಂದು ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟುಹೋಗುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಹೊರಬೀಳಲಿದೆ, ಅದೇ ದಿನ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಫಲಿತಾಂಶ ಕೂಡ ಪ್ರಕಟವಾಗಲಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!