spot_img
Sunday, February 15, 2026
spot_img

ಲೌಕಿಕ ಅಲೌಕಿಕ ಜ್ಞಾನ ದೀವಿಗೆಯಾಗಿದ್ದ ಕಾರಂತರು ಕೋಟದ ಸುಪುತ್ರ : ಮೇಘಾಲಯದ ರಾಜ್ಯಪಾಲ ಸಿ.ಎಚ್‌. ವಿಜಯಶಂಕ‌ರ್

ಜನಪ್ರತಿನಿಧಿ (ಕೋಟ) : ‘ಜ್ಞಾನ ಸಾರ್ಥಕತೆಯ ಬದುಕಿಗೆ ದಾರಿ ಮಾಡಿಕೊಡುತ್ತದೆ. ಕೋಟ ಶಿವರಾಮ ಕಾರಂತರಂತಹ ಜ್ಞಾನದ ದೀವಿಗೆ ಅಂದಿಗೂ, ಇಂದಿಗೂ, ಎಂದಿಗೂ ಪ್ರಸ್ತುತ. ಅವರು ಎಲ್ಲಾ ಕಾಲಕ್ಕೂ ಶಾಶ್ವತ’ ಎಂದು ಮೇಘಾಲಯದ ರಾಜ್ಯಪಾಲ ಸಿ.ಎಚ್‌. ವಿಜಯಶಂಕ‌ರ್ ಹೇಳಿದರು.

ಕೋಟತಟ್ಟುವಿನಲ್ಲಿರುವ ಕೋಟ ಶಿವರಾಮ ಕಾರಂತ ಥೀಂ ಪಾರ್ಕ್‌ನಲ್ಲಿ ನಿನ್ನೆ(ಆದಿತ್ಯವಾರ) ಕೋಟತಟ್ಟು ಗ್ರಾಮ ಪಂಚಾಯಿತಿ, ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಉಡುಪಿಯ ಶಿವರಾಮ ಕಾರಂತ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ನಡೆದ ಕೋಟ ಶಿವರಾಮ ಕಾರಂತ ಜನ್ಮದಿನೋತ್ಸವ ಹಾಗೂ 20ನೇ ವರ್ಷದ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ‘ಸವಿನ್ಯ; ಅನುಭವಗಳ ನಾವಿನ್ಯ’ದಲ್ಲಿ ವಾಗ್ಮಿ, ಸಾಹಿತಿ ಪ್ರೋ. ಕೃಷ್ಣೇಗೌಡ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

‘ನೇರ ನುಡಿಯ, ಪರಿಸರವಾದಿಯಾಗಿದ್ದ ಕೋಟ ಶಿವರಾಮ ಕಾರಂತರನ್ನು ಲೋಕವೇ ಗೌರವಿಸುತ್ತದೆ. ಲೌಕಿಕ ಅಲೌಕಿಕ ಜ್ಞಾನ ದೀವಿಗೆಯಾಗಿದ್ದ ಕಾರಂತರು ಕೋಟದ ಸುಪುತ್ರ’ ಎಂದು ಬಣ್ಣಿಸಿದರು.

ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸಾಹಿತಿ, ಮೈಸೂರಿನ ಪ್ರೊ. ಕೃಷ್ಣೇಗೌಡ, ‘ಕಾರಂತರ ಹೆಸರಿನ ಪ್ರಶಸ್ತಿ ಸ್ವೀಕರಿಸಿ ನನ್ನ ಗೌರವ ಇನ್ನಷ್ಟು ಹೆಚ್ಚಿದೆ. ಮನುಷ್ಯ ಚೈತನ್ಯ ಶಾಲಿಯಾಗಿ ಬೆಳೆಯಲು ಅಲ್ಲಿನ ವಾತಾವರಣ ಮುಖ್ಯ. ಸಮುದ್ರ, ಪರ್ವತ, ಹವಾಮಾನ ವೈಪರೀತ್ಯ, ದಟ್ಟ ಕಾಡು, ಬಿಸಿಲ ಬಾಧೆ, ಚಳಿ ಇವೆಲ್ಲಾ ಸವಾಲುಗಳಿದ್ದಲ್ಲಿ ಜನರು ಸಾಹಸಿಗಳಾಗುತ್ತಾರೆ ಎನ್ನುವುದಕ್ಕೆ ಕೋಟ ಶಿವರಾಮ ಕಾರಂತರೇ ಉತ್ತಮ ಸಾಕ್ಷಿ’ ಎಂದವರು ಹೇಳಿದರು.

ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು. ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ಯು.ಎಸ್. ಶೆಣೈ ಪ್ರಶಸ್ತಿ ಆಯ್ಕೆಯ ಬಗ್ಗೆ ಮಾಹಿತಿ ನೀಡಿದರು.

ಇದೇ ವೇಳೆ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯಿತಿಗಳನ್ನು ಪುರಸ್ಕರಿಸಲಾಯಿತು. ರಾಜ್ಯಪಾಲ ಸಿ.ಎಚ್‌. ವಿಜಯ ಶಂಕ‌ರ್, ಉದ್ಯಮಿ ಆನಂದ ಸಿ. ಕುಂದ‌ರ್ ಅವರನ್ನು ಸನ್ಮಾನಿಸಲಾಯಿತು. ಶಿಕ್ಷಕ ನರೇಂದ್ರ ಕುಮಾರ್ ಕೋಟ, ಕಾರಂತ ಥೀಂ ಪಾರ್ಕ್ ಮೇಲ್ವಿಚಾರಕರಾಗಿದ್ದ ಪ್ರಶಾಂತ್ ಅವರನ್ನು ಗೌರವಿಸಲಾಯಿತು.

ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಸಹಾಯಕ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ, ಕೋಟತಟ್ಟು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಹರೀಶ ಶೆಟ್ಟಿ ಉಪಸ್ಥಿತರಿದ್ದರು. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ. ಕುಂದ‌ರ್ ಸ್ವಾಗತಿಸಿದರು. ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಕೆ. ಸತೀಶ ಕುಂದರ್‌ ವಂದಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಜೊತೆ ಕಾರ್ಯದರ್ಶಿ ಸತೀಶ ವಡ್ಡರ್ಸೆ ಕಾರ್ಯಕ್ರಮ ನಿರ್ವಹಿಸಿದರು.

ಮಧ್ಯಾಹ್ನ ಕಾರಂತರ ಒಡನಾಡಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಪ್ರೋ. ಕೃಷ್ಣೇಗೌಡ ವಿಶೇಷ ಉಪನ್ಯಾಸ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಭಿಜ್ಞಾ ನೃತ್ಯ ಭೂಮಿ ಟ್ರಸ್ಟ್‌(ರಿ.) ಉಡುಪಿ ಇವರಿಂದ ʼನೃತ್ಯ ಸಿಂಚನʼ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!