spot_img
Thursday, April 2, 2026
spot_img

‌ಅತ್ಯಾಚಾರ ಪ್ರಕರಣ : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್‌ ಆದೇಶ | ಜೈಲೇ ಗತಿ !

ಜನಪ್ರತಿನಿಧಿ (ನವದೆಹಲಿ) : ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು(ಸೋಮವಾರ) ವಜಾಗೊಳಿಸಿ ಆದೇಶಿಸಿದೆ.

ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ತಮಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್‌ ರೇವಣ್ಣ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ನ್ಯಾಯಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಪ್ರಜ್ವಲ್‌ ರೇವಣ್ಣ ಸೆರೆಮನೆಯೇ ಗತಿಯಾಗಿದೆ.

ಪ್ರಜ್ವಲ್ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಆರೋಪಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಹೀಗಾಗಿ ಅವರ ವರ್ಚಸ್ಸಿಗೆ ಧಕ್ಕೆ ತರಲು ಅತ್ಯಾಚಾರದ ಆರೋಪ ಮಾಡಲಾಗಿದ್ದು, ಅವರಿಗೆ ಜಾಮೀನು ನೀಡುವಂತೆ ನ್ಯಾಯಾಲಯದ ಬಳಿ ಮನವಿ ಮಾಡಿದರು. ಆದರೆ ಆರೋಪಿ ಪ್ರಭಾವಿ ಎಂದು ಪರಗಣಿಸಿದ ಉನ್ನತ ನ್ಯಾಯಪೀಠ, ಜಾಮೀನು ಅರ್ಜಿಯನ್ನು ವಜಾಗೊಳಿಸಿತು.

ಆರು ತಿಂಗಳ ನಂತರ ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದೇ ಎಂಬ ರೊಹ್ಟಗಿ ಮನವಿಗೆ ಏನನ್ನೂ ಹೇಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು. ಈ ಮೂಲಕ ಜಾಮೀನು ಸಿಗಬಹುದೆಂಬ ಪ್ರಜ್ವಲ್ ರೇವಣ್ಣ ನಿರೀಕ್ಷೆ ಹುಸಿಯಾಗಿದೆ.

ಹಲವು ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಪ್ರಕರಣದಲ್ಲಿ ಇದೇ ವರ್ಷ ಮೇ ತಿಂಗಳಲ್ಲಿ ಪ್ರಜ್ವಲ್ ಜರ್ಮನಿಯಿಂದ ಹಿಂದಿರುಗಿದ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿತ್ತು.

ಪ್ರಕರಣದಲ್ಲಿ ಪ್ರಜ್ವಲ್ ಅವರ ತಂದೆ ಹೆಚ್. ಡಿ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆದರೆ, ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ದೂರಿನಲ್ಲಿ ಆರೋಪಿ ಎಂದು ಹೆಸರಿಸಲಾದ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಆದರೆ, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಇದೀಗ ಸುಪ್ರೀಂಕೋರ್ಟ್ ವಜಾಮಾಡಿದ್ದು, ಮುಂದೆ ಅವರು ಜೈಲಿನಲ್ಲಿಯೇ ಇರಬೇಕಾಗುತ್ತದೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!