spot_img
Wednesday, April 1, 2026
spot_img

ನಕಲಿ ಪರಶುರಾಮ : ಶಿಲ್ಪಿ ಕೃಷ್ಣ ನಾಯ್ಕ್‌ನನ್ನು ಏಳು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

ಜನಪ್ರತಿನಿಧಿ (ಕಾರ್ಕಳ) : ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಾಣ ಮಾಡಿರುವ ಶಿಲ್ಪಿ, ಕೃಷ್ ಆರ್ಟ್‌ ವರ್ಲ್ಡ್‌ನ ಕೃಷ್ಣ ನಾಯ್ಕನನ್ನು ಕಾರ್ಕಳ ನಗರ ಪೊಲೀಸರು (ನ. 10ರಂದು) ಕೇರಳದ ಕ್ಯಾಲಿಕಟ್‌ನಲ್ಲಿ ಬಂಧಿಸಿದ್ದರು. ಇಂದು(ಸೋಮವಾರ) ಕಾರ್ಕಳ ತಾಲೂಕು ನ್ಯಾಯಾಲಯಕ್ಕೆ ಪೊಲೀಸರು ಹಾಜರು ಪಡಿಸಿದ್ದರು. ನ್ಯಾಯಾಲಯ ಆರೋಪಿ ಶಿಲ್ಪಿ ಕೃಷ್ಣ ನಾಯ್ಕ್‌ ನಿಗೆ ಏಳು ದಿನಗಳ ಪೊಲೀಸ್‌ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪರಶುರಾಮನ ಕಂಚಿನ ಪ್ರತಿಮೆ ರಚನೆಯಲ್ಲಿ ಅಕ್ರಮ ಎಸಗಿರುವ ಆರೋಪದಲ್ಲಿ ಶಿಲ್ಪಿ ಕೃಷ್ಣ ನಾಯ್ಕ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಉಡುಪಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿತ್ತು.

ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಕೃಷ್ಣ ನಾಯ್ಕ್‌ ತಲೆ ಮರೆಸಿಕೊಳ್ಳಲು ಯತ್ನಿಸಿದ್ದ. ಪೊಲೀಸರು ಕೃಷ್ಣ ನಾಯ್ಕ್ ಬಂಧನಕ್ಕಾಗಿ ಪತ್ತೆ ಕಾರ್ಯ ಮಾಡಿದ್ದರು. ಕೇರಳದ ಕ್ಯಾಲಿಕಟ್ ನಲ್ಲಿ ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯ್ಕ್ ಅವರನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!