spot_img
Wednesday, April 1, 2026
spot_img

ನೆಲ್ಲಿಕಟ್ಟೆ: ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಅಂಪಾರು ವಲಯದ ನೆಲ್ಲಿಕಟ್ಟೆಯ ಧನಲಕ್ಷ್ಮಿ ಜ್ಞಾನವಿಕಾಸ ಕೇಂದ್ರ ಮತ್ತು ಪ್ರಗತಿಬಂಧು ಸ್ವಸಹಾಯ ಸಂಘಗಳ ನೆಲ್ಲಿಕಟ್ಟೆ ಒಕ್ಕೂಟದ ವತಿಯಿಂದ, ಕರ್ನಾಟಕ ಸರ್ಕಾರ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕರನಾರಾಯಣ, ಎನ್.ಸಿ.ಡಿ ಕ್ಯಾಂಪ್ ಜಿ.ಎಚ್ ಕುಂದಾಪುರ, ರೋಟರಿ ಕ್ಲಬ್ ಅಂಪಾರು, ಗ್ರಾಮ ಪಂಚಾಯತ್ ಅಂಪಾರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಶಿರೂರು ಮುದ್ದುಮನೆ ಇವರ ಸಹಯೋಗದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆರೋಗ್ಯ ತಪಾಸಣಾ ಶಿಬಿರ ಜೈ ಭಾರತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕುಂದಾಪುರ ತಾಲೂಕಿನ ಅಧ್ಯಕ್ಷ ಉಮೇಶ ಶೆಟ್ಟಿ ಶ್ಯಾನ್ಕಟ್ಟು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಪಾರು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಗೋಪಾಲಕೃಷ್ಣ ಕಿಣಿ ವಹಿಸಿದ್ದರು.
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಪಾರ್ವತಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿ, ಜ್ಞಾನವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ಸಾಮಾಜಿಕ ಪ್ರಗತಿ, ಆರ್ಥಿಕ, ಶೈಕ್ಷಣಿಕ, ಆರೋಗ್ಯ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವಂತ ಕಾರ್ಯ ಜೊತೆಗೆ ಜ್ಞಾನದೀಪ ಶೌರ್ಯ ಮುಂತಾದ ಕಾರ್ಯಕ್ರಮವನ್ನು ಯೋಜನೆಯು ಮಾಡುತ್ತಿದೆ ಎಂದರು.

ಅಂಪಾರು ರೋಟರಿ ಕ್ಲಬ್ ಅಧ್ಯಕ್ಷ ದಿನೇಶ್ ಪೂಜಾರಿ ಗೊರಟೆ, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆ ಶಿರೂರು ಮುದ್ದುಮನೆಯ ಪ್ರತಿನಿಧಿಗಳಾದ ಯು ಶಂಕರ್ ಶೆಟ್ಟಿ, ಶಾರದೋತ್ಸವ ಸಮಿತಿ, ಜೈ ಭಾರತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆಯ ಗೌರವಾಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಹಳೆ ವಿದ್ಯಾರ್ಥಿ ಸಂಘ ಜೈ ಭಾರತಿ ಅನುದಾನದ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ ಇದರ ಅಧ್ಯಕ್ಷ ಸತೀಶ್ ಶೆಟ್ಟಿ ಹಡಾಳಿ, ಜೈ ಭಾರತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಟ್ಟೆ ಇದರ ಮುಖ್ಯೋಪಾಧ್ಯಾಯರಾದ ಸುರೇಂದ್ರ ಶೆಟ್ಟಿ, ಅಂಪಾರು ವಲಯದ ವಲಯ ಅಧ್ಯಕ್ಷ ಶ್ರೀನಿವಾಸ ನಾಯ್ಕ್, ಅಂಪಾರು ವಲಯದ ನೆಲ್ಲಿಕಟ್ಟೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಆಚಾರ್ಯ, ಪಾರ್ವತಿ ಮಹಾಬಲ ಶೆಟ್ಟಿ ಕಣ್ಣಿನ ಆಸ್ಪತ್ರೆಯ ವೈದ್ಯರಾದ ಡಾ.ರಶ್ಮಿ, ಎನ್.ಸಿ.ಡಿ ಕ್ಯಾಂಪ್ ಜಿ‌ಎಚ್ ಕುಂದಾಪುರದ ವೈದ್ಯರಾದ ಡಾ.ಅಹಿಶ್ ಉಪಸ್ಥಿತರಿದ್ದರು.

ಸೇವಾಪ್ರತಿನಿಧಿ ಆಜ್ವಿನ್, ಸಂಯೋಜಕಿ ಸುರೇಖಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಒಕ್ಕೂಟದ ಸದಸ್ಯರು, ಪದಾಧಿಕಾರಿಗಳು, ಗ್ರಾಮ ಪಂಚಾಯಿತಿಯ ಸದಸ್ಯರು ಹಾಜರಿದ್ದರು.

ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು ಸ್ವಾಗತಿಸಿದರು. ಅಂಪಾರು ವಲಯದ ಮೇಲ್ವಿಚಾರಕ ಮಂಗಳ ಗುರುಪಾದ ವಂದಿಸಿದರು. ಗಣೇಶ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!