spot_img
Wednesday, January 22, 2025
spot_img

ʼಕರಿಯ ಕುಮಾರಸ್ವಾಮಿʼ ಜಮೀರ್‌ ಹೇಳಿಕೆಗೆ ಜೆಡಿಎಸ್‌ ಕೆಂಡಾಮಂಡಲ | ವರ್ಣಭೇದ ತಾರತಮ್ಯ ಎಸಗಿದ ಜಮೀರ್‌ ರಾಜೀನಾಮೆಗೆ ಜೆಡಿಎಸ್‌ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುತ್ತಿದ್ದ ವೇಳೆ ʼಕಾಲಾ ಕುಮಾರಸ್ವಾಮಿʼ(ಕರಿಯ ಕುಮಾರಸ್ವಾಮಿ) ಎಂದು ಕರೆದಿದ್ದನ್ನು ರಾಜ್ಯ ಜೆಡಿಎಸ್‌ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಜಮೀರ್‌ ಹಾಗೂ ಕಾಂಗ್ರೆಸ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್‌, ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ

ಜಮೀರ್‌ ಅಹ್ಮದ್‌ ಖಾನ್‌,  ಜನಾಂಗೀಯ ನಿಂದನೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರನ್ನು, ​ಜಮೀರ್​ ಅಹ್ಮದ್​ ಖಾನ್‌ “ಕಾಲಾ ಕುಮಾರಸ್ವಾಮಿ” (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ ಎಂದು ಹೇಳಿದೆ.

ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್​ ಅಹ್ಮದ್​ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ ಅಪರಾಧ ಎಂದೂ ಹೇಳಿದೆ.

ಈ ಕೂಡಲೇ ಗೃಹ ಸಚಿವರಾದ ಡಾ ಜಿ. ಪರಮೇಶ್ವರ್‌, ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷ ಆಗ್ರಹಿಸಿದೆ.

ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಮತ್ತು ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್‌ ರಾಜೀನಾಮೆ ಪಡೆಯಬೇಕು ಎಂದು ಜೆಡಿಎಸ್‌ ಒತ್ತಾಯಿಸಿದೆ.

https://x.com/JanataDal_S/status/1855855420516020401

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!