spot_img
Wednesday, April 1, 2026
spot_img

ಉದ್ಯೋಗವಕಾಶ : ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನಲ್ಲಿ 1000 ಖಾಲಿ ಹುದ್ದೆಗಳು ! | ಇಲ್ಲಿದೆ ಪೂರ್ಣ ಮಾಹಿತಿ

ಜನಪ್ರತಿನಿಧಿ (ಮಾಹಿತಿ) : ಭಾರತದ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 1000 ಎಕ್ಸಿಕ್ಯೂಟಿವ್‌ (ಸೇಲ್ಸ್‌ & ಆಪರೇಶನ್ಸ್)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್‌ 16, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದೊಂದು ಸುವರ್ಣ ಅವಕಾಶವಾಗಿದೆ.

ವಿದ್ಯಾರ್ಹತೆ:
ಬ್ಯಾಂಕ್ ನೇಮಕಾತಿ ಅಧಿಸೂಚನೆಯಲ್ಲಿರುವ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್‌ 1, 2024ಕ್ಕೆ ಕನಿಷ್ಠ 20 ವರ್ಷ ಮತ್ತು ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.

ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWBD ಅಭ್ಯರ್ಥಿಗಳು: 10 ವರ್ಷಗಳು

ಉದ್ಯೋಗದ ಸ್ಥಳ:
ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ತಿಂಗಳಿಗೆ 29,000- 31,000 ಸಂಬಳ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ:
SC/ST/PwBD ಅಭ್ಯರ್ಥಿಗಳು: ರೂ.250/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1050/-
ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಆನ್‌ಲೈನ್ ಪರೀಕ್ಷೆ
ಡಾಕ್ಯುಮೆಂಟ್ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು ಎಂದು ಬ್ಯಾಂಕ್‌ ನ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಸುಲಭವಾಗಬೇಕೆಂದೇ ನೇರ ಲಿಂಕ್‌ನ್ನು ಈ ಕೆಳಗೆ ನೀಡಲಾಗಿದೆ.

ಕ್ಲಿಕ್‌ ಮಾಡಿ, ಈ ಮೂಲಕ ಅರ್ಜಿ ಸಲ್ಲಿಸಿ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!