spot_img
Wednesday, April 1, 2026
spot_img

ಬ್ರಹ್ಮಾವರ ಪೊಲೀಸ್ ವಶದಲ್ಲಿದ್ದ ಆರೋಪಿ ಸಾವು ಪ್ರಕರಣ | ಸಿಐಡಿ ತನಿಖೆ ಆರಂಭ | ಇಬ್ಬರ ಅಮಾನತು

ಜನಪ್ರತಿನಿಧಿ (ಉಡುಪಿ) : ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಆರಂಭಗೊಂಡಿದೆ.

ರಾಜಧಾನಿ ಬೆಂಗಳೂರಿನಿಂದ ಬಂದಿರುವ ಸಿಐಡಿ ಪೊಲೀಸರ ತಂಡ ಪ್ರಕರಣದ ತನಿಖೆ ಆರಂಭಿಸಿದೆ ಎಂದು ಎಸ್‌ಪಿ ಡಾ. ಅರುಣ್‌ ಕೆ. ಮಾಹಿತಿ ನೀಡಿದ್ದಾರೆ.

ಆರೋಪಿಗಳನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾಗುವ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನಗಳನ್ನು ಪಾಲಿಸದ ಕಾರಣಕ್ಕೆ ಬ್ರಹ್ಮಾವರ ಪೊಲೀಸ್‌ ಠಾಣೆಯ ಸಬ್‌ ಇನ್ಸ್ಪೆಕ್ಟರ್‌ ಮಧು ಪಿ, ಪ್ರಭಾರ ಠಾಣಾಧಿಕಾರಿ ಸುಜಾರ ಅವರನ್ನು ಅಮಾನತು ಮಾಡಲಾಇದೆ ಎಂದೂ ಅವರು ತಿಳಿಸಿದ್ದಾರೆ.

ಮೃತ ಬಿಜು ಮೋಹನ್‌ ಅವರ ಸಂಬಂಧಿ, ಕೇರಳದ ಕೊಲ್ಲಂ ಅನೀಶ್‌ ಡೇನಿಲ್‌ ಅವರು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೀಡಿರುವ ನಿರ್ದೇಶನಗಳಂತೆ ಮೃತ ವ್ಯಕ್ತಿಯ ಶವದ ಪಂಚನಾಮೆಯನ್ನು ಉಡುಪಿಯ ಜೆಏಂಎಫ್‌ ಸಿ ನ್ಯಾಯಾಧೀಶರು ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಯನ್ನು ಮಣಿಪಾಲುದ ಕೆಎಂಸಿ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ನೀಡಿದ್ದು, ಅವರು ಕೇರಳಕ್ಕೆ ಒಯ್ದಿದ್ದಾರೆಂದು ಎಸ್‌ಪಿ ಮಾಹಿತಿ ಕೊಟ್ಟಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!