spot_img
Wednesday, April 1, 2026
spot_img

ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ನಿರ್ಮಾಣ | ನಿಷೇಧಾಜ್ಞೆ ಜಾರಿ

ಜನಪ್ರತಿನಿಧಿ (ಮಣಿಪುರ) : ಸಂಘರ್ಷ ಪೀಡಿತ ಮಣಿಪುರದ ಜಿರೀಬಾಮ್‌ ಜಿಲ್ಲೆಯಲ್ಲಿ ೧೧ ಶಂಕಿತ ಉಗ್ರರು ಹತ್ಯೆಯಾದ ಒಂದು ದಿನದ ಬಳಿಕ, ಇಂದು ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಬೆಳಗ್ಗೆಯಿಂದ ಪೊಲೀಸರು ಗಸ್ತು ತಿರುಗುತ್ತಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಕುರಾಧೋರ್‌ ನ ಕರೋಂಗ್‌ ಮಾರುಕಟ್ಟೆಯ ಸುತ್ತಮುತ್ತಿಮ ಹಲವು ಅಂಗಡಿಗಳು ಹಾಗೂ ಮನೆಗಳನ್ನು ದಾಳಿಯ ಸಂದರ್ಭದಲ್ಲಿ ಸುಟ್ಟು ಹಾಕಿದ್ದಾರೆ. ಮಾತ್ರವಲ್ಲದೇ ಬೊರೊಬೇಕ್ರಾ ಪೊಲೀಸ್‌ ಠಾಣೆ ಹಾಗೂ ಅದರ ಪಕ್ಕದಲ್ಲಿರುವ ಸಿಆರ್‌ಪಿಎಫ್‌ ಶಿಬಿರಕ್ಕೂ ಬೆಂಕಿ ಹೆಚ್ಚಿ ವಿಕೃತಿ ಮೆರೆದಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಸಿಆರ್‌ಪಿಎಫ್‌ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದ್ದು, ಅಸ್ಸಾಂ ರೈಫಲ್ಸ್‌, ಸಿಆರ್‌ಪಿಎಫ್‌ ಹಾಗೂ ಪೊಲೀಸರನ್ನೊಳಗೊಂಡ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತ , ಸಿಆರ್‌ಪಿಎಫ್‌ ಸಿಬ್ಬಂದಿಯ ʼಗ್ರಾಮದ ಸ್ವಯಂಸೇವಕರನ್ನು ಹತ್ಯೆ ಮಾಡಿದೆ ಎಂದು ಆರೋಪಿಸಿ ಕುಕಿ ಕೋ ಸಮುದಾಯ ತಮ್ಮ ಪ್ರದೇಶಗಳಲ್ಲಿ ಬೆಳಿಗ್ಗೆ ಐದು ಗಂಟೆಯಿಂದ ಸಂಜೆ ಆರು ಗಂಟೆಯವರೆಗೆ ಬಂದ್‌ ಗೆ ಕರೆ ನೀಡಲಾಗಿದೆ.

ಜಕುರಾಧೋರ್‌ನಲ್ಲಿ ನಿಯೋಜಿಸಿರುವ ಸಿಆರ್‌ಪಿಎಫ್‌ ಸಿಬ್ಬಂದಿ ಹಾಗೂ ಸಮೀಪದ ಬೊರೋಬೆಕ್ರಾ ಪೊಲೀಸ್‌ ಠಾಣೆಯ ಮೇಲೆ ಶಸ್ತ್ರಸಜ್ಜಿತ ಉಗ್ರರು ಸೋಮವಾರ ಮಧ್ಯಾಹ್ನ ೩ರವೇಳೆಗೆ ದಾಳಿ ನಡೆಸಿದ್ದಾರೆ. ಸಿಆರ್‌ಪಿಎಫ್‌ ಸಿಬ್ಬಂದಿ ಹಾಗೂ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಸುಮಾರು ೪೫ ನಿಮಿಷಗಳ ಕಾಲ ಹುಂಡಿನ ಚಕಮಕಿ ನಡೆದಿದೆ. ಆ ಬಳಿಕ ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ಶೋಧ ನಡೆಸಿದಾಗ ೧೦ ಮೃತದೇಹಗಳು ಹಾಗೂ ಎಕೆ ರೈಫಲ್‌ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ದೊರೆತಿರುವುದಾಗಿ ಮಣಿಪುರ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಮೈತೇಯಿ ಸಮುದಾಯಕ್ಕೆ ಸೇರಿದವರು ಎನ್ನಲಾದ ಶಸ್ತ್ರಸಜ್ಜಿತ ಗುಂಪೊಂದು ಕಳೆದ ಶುಕ್ರವಾರ ಹಮರ್‌ ಸಮುದಾಯದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಹತ್ಯೆ ಮಾಡಿತ್ತು. ಆ ಬಳಿಕ ಜಿರೀಬಾಮ್‌ ಜಿಲ್ಲೆಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!