spot_img
Friday, April 3, 2026
spot_img

ತಾಲ್ಲೂಕು ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಟ್ಟಿಅಂಗಡಿ ವಸತಿಶಾಲೆಗೆ ಪ್ರಶಸ್ತಿ

ಜನಪ್ರತಿನಿಧಿ (ಕುಂದಾಪುರ) : ಶಾಂತಿವನ ಟ್ರಸ್ಟ್ ನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿಯಲ್ಲಿ ಹೊರತಂದ ಜ್ಞಾನ ವರ್ಷಿಣಿ ಮತ್ತು ಜ್ಞಾನ ದರ್ಶಿನಿ ಪುಸ್ತಕಗಳ ಕುರಿತ ತಾಲ್ಲೂಕು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದರು.

ಪ್ರೌಢಶಾಲಾ ವಿಭಾಗದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ಕುಮಾರಿ ಪೂರ್ವಿ ಜೆ ಎಮ್ ಪ್ರಥಮ ಸ್ಥಾನ, ಕನ್ನಡ ಭಾಷಣ ಸ್ಪರ್ಧೆಯಲ್ಲಿ ಕುಮಾರಿ ರಿಷಿಕಾ ದೇವಾಡಿಗ ದ್ವಿತೀಯ ಸ್ಥಾನ ಹಾಗೂ ಚಿತ್ರಕಲಾ ವಿಭಾಗದಲ್ಲಿ ಅನನ್ಯ ವಿ ತೃತೀಯ ಸ್ಥಾನವನ್ನು ಪಡೆದುಕೊಂಡರು.

ಶಾಲಾ ಪ್ರಾಂಶುಪಾಲರು ಹಾಗೂ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳಾದ ಶರಣ ಕುಮಾರ ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!