spot_img
Wednesday, January 22, 2025
spot_img

ನಕಲಿ ಪರಶುರಾಮ : ತಪ್ಪಿಗೆ ನೇರ ಹೊಣೆಯಾಗಿರುವವರು ವಿಧಾನಸಭೆ ಸದಸ್ಯ, ಕಲಾವಿದ ಮಾತ್ರ ಜೈಲುಪಾಲಾಗಿದ್ದಾನೆ : ಮುನಿಯಾಲು ಆಕ್ರೋಶ

ಜನಪ್ರತಿನಿಧಿ (ಉಡುಪಿ) : ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಉಮಿಕಲ್‌ ಬೆಟ್ಟದ ಮೇಲೆ ನಿರ್ಮಿಸಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿನ ಪರಶುರಾಮ ಪ್ರತಿಮೆ ನಿರ್ಮಾಣದಲ್ಲಿ ಅಕ್ರಮ ಎಸಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಪ್ರತಿಮೆಯ ನಿರ್ಮಾಣ ಕಾರ್ಯದಲ್ಲಿ ವಂಚನೆ ಎಸಗಿರುವ ಶಿಲ್ಪಿ ಕೃಷ್ಣ ನಾಯ್ಕ್‌ ಬಂಧನಕ್ಕೊಳಗಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಉಳಿದ ಎಲ್ಲಾ ಆರೋಪಿಗಳನ್ನೂ ಬಂಧಿಸಬೇಕೆಂದು ಕಾರ್ಕಳ ಕಾಂಗ್ರೆಸ್‌ ಮುಖಂಡ ಉದಯ್‌ ಕುಮಾರ್‌ ಮುನಿಯಾಲು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುನಿಯಾಲು, ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಭಾಗ ಎಲ್ಲಿಗೆ ಹೋಗಿದೆ ಎಂಬ ಬಗ್ಗೆಯೂ ಪೊಲೀಸರು ಸೂಕ್ತ ತನಿಖೆ ನಡೆಸಬೇಕು. ಈ ಅಕ್ರಮದಲ್ಲಿ ಹಲವರ ಕೈವಾಡವಿದ್ದು ಪೊಲೀಸರು ಎಲ್ಲರನ್ನು ವಿಚಾರಣೆಗೊಳಪಡಿಸಬೇಕು. ಪ್ರಕರಣವನ್ನು ಅತಿ ಶೀಘ್ರದಲ್ಲಿ ಇತ್ಯರ್ಥ ಪಡಿಸಿ. ಉಮಿಕಲ್‌ ಬೆಟ್ಟದ ಮೇಲೆ ಅಸಲಿ ಕಂಚಿನ ಪ್ರತಿಮೆಯನ್ನು ಸ್ಥಾಪಿಸಿ ಪ್ರವಾಸಿಗರಿಗೆ ಮುಕ್ತಗೊಳಿಸಬೇಕು ಎಂದವರು ಹೇಳಿದ್ದಾರೆ.

ಪರಶುರಾಮನ ಪ್ರತಿಮೆಯ ವಿಚಾರದಲ್ಲಿ ಶಿಲ್ಪಿ ಕೃಷ್ಣ ನಾಯ್ಕ್ ಗೆ ಸಮಸ್ಯೆ ಮಾಡುವುದು ನಮ್ಮ ಉದ್ದೇಶವಲ್ಲ. ತಪ್ಪಿಗೆ ನೇರ ಹೊಣೆಯಾಗಿರುವವರು ವಿಧಾನಸಭೆ ಸದಸ್ಯರಾಗಿದ್ದು, ಕಲಾವಿದ ಮಾತ್ರ ಜೈಲುಪಾಲಾಗಿದ್ದಾನೆ ಎಂದು ಹೇಳುವುದರ ಮೂಲಕ ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ ಅವರ ಬಗ್ಗೆ ಅವರು ಆಕ್ರೋಶ ಹೊರಹಾಕಿದರು. ಪ್ರತಿಮೆ ನಿರ್ಮಾಣಕ್ಕೆಂದು ಮಂಜೂರಾದ 1.25 ಕೋಟಿ ರೂ.ಗಳನ್ನು ಟೆಂಡರ್‌ಗೂ ಮೊದಲೇ ಕೃಷ್ಣ ನಾಯ್ಕ್‌ಗೆ ನೀಡಿದ್ದಾರೆ. ಕೇವಲ 45 ದಿನಗಳಲ್ಲಿ 33 ಅಡಿ ಕಂಚಿನ ಪ್ರತಿಮೆ ನಿರ್ಮಾಣ ಮಾಡುವುದಕ್ಕೆ ಹೇಗೆ ಸಾಧ್ಯ ಎಂದು ಅವರು ಕಟುವಾಗಿ ಪ್ರಶ್ನಿಸಿದರು.

ಇದು ಕೃಷ್ಣ ನಾಯ್ಕ್ ಒಬ್ಬರ ಕೆಲಸವಲ್ಲ, ನಿರ್ಮಿತಿ ಕೇಂದ್ರದ ಎಂಜಿನಿಯರ್‌ಗಳು ಇದರಲ್ಲಿ ಭಾಗಿಯಾಗಿದ್ದಾರೆ. ಪ್ರತಿಮೆ ನಿರ್ಮಾಣದ ಹಣ ಎಲ್ಲಿಗೆ ಹೋಯಿತು ಎಂದು ಶಾಸಕ ಸುನಿಲ್‌ ಕುಮಾರ್‌ ಅವರು ಕಾರ್ಕಳದ ಜನರಿಗೆ ಸ್ಪಷ್ಟನೆ ನೀಡುವುದರೊಂದಿಗೆ ಜನರ ಎದುರು ಕ್ಷಮೆಯಾಚಿಸಲಿ ಎಂದು ಅವರು ಆಗ್ರಹಿಸಿದ್ದಲ್ಲದೇ, ಈ ಅಕ್ರಮದಲ್ಲಿ ಶಾಸಕರೂ ಇರುವುದು ಸಾಬೀತಾದಲ್ಲಿ ಶಾಸಕರನ್ನೂ ಪೊಲೀಸರು ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾರ್ಕಳ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸುಭೋದ್‌ ರಾವ್‌, ಸೇರಿ ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!