spot_img
Friday, April 3, 2026
spot_img

ಭಂಡಾರ್ಕಾರ್ಸ್ ಕಾಲೇಜು : ನವೆಂಬರ್ 21ಕ್ಕೆ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಅಂತ‌ರ್ ಕಾಲೇಜು, ಸಂಗೀತ ಸ್ಪರ್ಧೆ | ರವಿ ಬಸ್ರೂರು, ಗೀತಂ ಗಿರೀಶ್‌ ಭಾಗಿ

ಜನಪ್ರತಿನಿಧಿ (ಕುಂದಾಪುರ) : ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ಸಂಸ್ಥಾಪಕರ ದಿನಾಚರಣೆಯ ಅಂಗವಾಗಿ ಅಂತ‌ರ್ ಕಾಲೇಜು, ಸಂಗೀತ ಸ್ಪರ್ಧೆ ಉದ್ಘಾಟನಾ ಸಮಾರಂಭ  21 ನವೆಂಬರ್ 2024, ಗುರುವಾರದಂದು ಕಾಲೇಜಿನ ರಾಧಾ ಬಾಯ್‌ ಸಭಾಂಗಣದಲ್ಲಿ ಬೆಳಿಗ್ಗೆ 09:30ಕ್ಕೆ ನಡೆಯಲಿದೆ ಎಂದು ಕಾಜೀಜು ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಗೀತ ನಿರ್ದೇಶಕರಾದ ಗೀತಂ ಗಿರೀಶ್ ನೆರವೇರಿಸಲಿದ್ದು, ಸಭಾಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ| ಶುಭಕರಾಚಾರಿ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಚಂದನವನದ ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ ರವಿ ಬಸ್ರೂರು ಆಗಮಿಸುತ್ತಿದ್ದು, ಸಭಾ ಕಾರ್ಯಕ್ರಮದಲ್ಲಿ ಕಾಲೇಜಿನ ಹಿರಿಯ ವಿಶ್ವಸ್ಥರಾದ ಕೆ. ಶಾಂತಾರಾಮ ಪ್ರಭು, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ. ಸತ್ಯನಾರಾಯಣ, ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ| ಜಿ. ಎಮ್. ಗೊಂಡ, ಕಾಲೇಜಿನ ಲಲಿತ ಕಲಾ ಸಂಘದ ಸಂಚಾಲಕ ಶಶಾಂಕ್ ಪಟೇಲ್ ಸೇರಿ ವಿಶ್ವಸ್ಥರು, ಆಡಳಿತ ಮಂಡಳಿಯ ಸದಸ್ಯರು, ಬೋಧಕ – ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿರಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಸುಮಾರು 18 ರಿಂದ 22 ಕಾಲೇಜಿನ ವಿದ್ಯಾರ್ಥಿಗಳು ಈ ಸಂಗೀತ ಸ್ಪರ್ದೆಯಲ್ಲಿ ಭಾಗವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!